SHIVAMOGGA NEWS TODAY

ಹವಾಮಾನ ಇಲಾಖೆ ಮುನ್ಸೂಚನೆ : ಮುಂದಿನ ಒಂದು ವಾರ ಎಲ್ಲೆಲ್ಲಿ ಭಾರಿ ಮಳೆಯಾಗಲಿದೆ ಗೊತ್ತೇ?

ajjimane ganesh ನವೀಕರಣ: 23 ಏಪ್ರಿಲ್ 2026, 7:27 ಫೂರ್ವಾಹ್ನ ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಬಿಸಿಲ ಝಳದಳದಲ್ಲಿ ತಳಮಳವಾಗುತ್ತಿರುವ ನಡುವೆಯೇ ರಾಜ್ಯ ಹವಾಮಾನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯದ ಕೆಲವೆಡೆ ಗುರುವಾರದಿಂದ ಅಂದರೆ ಇವತ್ತಿನಿಂದ ಮುಂದಿನ ಒಂದು ವಾರ ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ಹವಾಮಾನ ಇಲಾಖೆ ಮುನ್ಸೂಚನೆ

  • ಉತ್ತರಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು ಗದಗ ಜಿಲ್ಲೆಯಲ್ಲಿ ಒಂದೆರಡು ಕಡೆ ಗುರುವಾರ ಭಾರಿ ಗಾಳಿಯೊಂದಿಗೆ ಮಳೆಯಾಗುವ ಸಂಭವವಿದೆ.
  • ಬೀದರ್, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯ ಒಂದು ಅಥವಾ ಎರಡು ಕಡೆ ಗಂಟೆಗೆ 30 ರಿಂದ 40 ಕಿ.ಮೀ.ವೇಗದಲ್ಲಿ ಗಾಳಿಯೊಂದಿಗೆ, ಮಧ್ಯಮ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
  • ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ.
  • ಇನ್ನೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ಮೈಸೂರು ಮತ್ತು ಚಾಮರಾಜನಗರದ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ.
  • ಮಳೆ ಬಂದರೂ ಇಂದಿನಿಂಧ ಐದು ದಿನಗಳ ಕಾಲ ತಾಪಮಾನದಲ್ಲಿ ದೊಡ್ಡ ವ್ಯತ್ಯಾಸವಿಲ್ಲ ಎಂದು ಇಲಾಖೆ ತಿಳಿಸಿದೆ.
 ಹವಾಮಾನ ಇಲಾಖೆ ಮುನ್ಸೂಚನೆ :  ಮುಂದಿನ ಒಂದು ವಾರ ಎಲ್ಲೆಲ್ಲಿ ಭಾರಿ ಮಳೆಯಾಗಲಿದೆ ಗೊತ್ತೇ? heavy rain  expected to hit various districts of Karnataka
ಹವಾಮಾನ ಇಲಾಖೆ ಮುನ್ಸೂಚನೆ : ಮುಂದಿನ ಒಂದು ವಾರ ಎಲ್ಲೆಲ್ಲಿ ಭಾರಿ ಮಳೆಯಾಗಲಿದೆ ಗೊತ್ತೇ? heavy rain expected to hit various districts of Karnataka

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ