ಶಿವಮೊಗ್ಗಲ್ಲಿ 2 ದಿನಗಳ ಕಾಲ ಮಳೆ ರೆಡ್‌ಅಲರ್ಟ್‌: ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ 

ಹಂಚಿಕೊಳ್ಳಿ
WhatsApp Facebook X Telegram
Heavy Rain Yellow Alert Issued for 9 Districts Weather Warning Heavy Rain This Week  Red Alert Urgent Weather Alert july 16Thirthahalli Schools rain fall report
Heavy Rain rain fall report

Heavy Rain ಶಿವಮೊಗ್ಗ : ಭಾರತೀಯ ಹವಾಮಾನ ಇಲಾಖೆಯು ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನ ಶಿವಮೊಗ್ಗ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ಘೋಷಿಸಿದೆ. ಈಗಾಗಲೇ ರಾಜ್ಯಕ್ಕೆ ಮುಂಗಾರು ಪ್ರವೇಶಗೊಂಡಿದ್ದು, ನಾಳೆಯಿಂದ ಎರಡು ದಿನಗಳ ಕಾಲ ಶಿವಮೊಗ್ಗ ಜಿಲ್ಲೆಯಲ್ಲಿ ಸಾಮಾನ್ಯದಿಂದ ಭಾರೀ ಪ್ರಮಾಣದ ಮಳೆ ಬೀಳಬಹುದಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು ಸಾಂದರ್ಭಿಕವಾಗಿ ತಕ್ಷಣ ಕ್ರಮ ಕೈಗೊಳ್ಳಬೇಕಾದ ತುರ್ತು ಪರಿಸ್ಥಿತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸದಾ ಸಿದ್ಧರಿರುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಶಿವಮೊಗ್ಗ : ಮಲೆನಾಡಿನಲ್ಲಿ ಮುಂಗಾರು ಆರಂಭ; ಎಲ್ಲೆಲ್ಲಿ ಎಷ್ಟೆಷ್ಟು ಮಳೆಯಾಗಿದೆ, ಅತಿ ಹೆಚ್ಚು ಮಳೆ ಬಿದ್ದ ತಾಲೂಕು ಯಾವುದು? 

Heavy Rain ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಹವಾಮಾನ ತಜ್ಞರ ವರದಿಯನ್ನಾಧರಿಸಿ, ಭಾರೀ ಪ್ರಮಾಣದ ಮಳೆ ಬಂದಲ್ಲಿ ಸಂಭವಿಸಬಹುದಾದ ಅವಘಡಗಳ ಕುರಿತು ಏರ್ಪಡಿಸಲಾಗಿದ್ದ ಸಂಬಂಧಿಸಿದ ಇಲಾಖಾ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಇಂತಹ ತುರ್ತು ಸಂದರ್ಭದಲ್ಲಿ ಕಂದಾಯ, ಅರಣ್ಯ, ಅಗ್ನಿಶಾಮಕ, ಪಂಚಾಯತ್‌ರಾಜ್‌, ಲೋಕೋಪಯೋಗಿ, ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ರಜೆಯ ಮೇಲೆ ತೆರಳದಂತೆ ಹಾಗೂ ತಮ್ಮ ಕಾರ್ಯಕ್ಷೇತ್ರದಲ್ಲಿದ್ದು, ಸಕಾಲದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸಲಹೆ ನೀಡಿದ ಅವರು, ಅಧಿಕಾರಿ-ಸಿಬ್ಬಂಧಿಗಳು ಕೇಂದ್ರಸ್ಥಾನದಿಂದ ಹೊರಹೋಗದಂತೆ ಅವರು ಸೂಚನೆ ನೀಡಿದ್ದಾರೆ.

ಈ ತುರ್ತು ಸಂದರ್ಭದಲ್ಲಿ ಪ್ರಾಣ ಮತ್ತು ಆಸ್ತಿಪಾಸ್ತಿ ರಕ್ಷಣೆಗೆ ಅಗತ್ಯವಿರುವ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಟಾರ್ಚ್‌ಗಳು, ಬ್ಯಾಟರಿಗಳು, ಮೊಬೈಲ್ ಪವರ್ ಬ್ಯಾಂಕ್‌ಗಳು ಮತ್ತು ಹೆಚ್ಚುವರಿ ಬ್ಯಾಟರಿಗಳನ್ನು ಸಿದ್ಧವಾಗಿಟ್ಟುಕೊಳ್ಳುವುದರ ಜೊತೆಗೆ ತುರ್ತು ಬಳಕೆಗೆ ಅಗತ್ಯವಿರುವ ಕುಡಿಯುವ ನೀರು, ಒಣ ಆಹಾರ, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಮತ್ತು ವೈದ್ಯಕೀಯ ಚೀಟಿಗಳನ್ನು ಜೊತೆಯಲ್ಲಿಟ್ಟುಕೊಳ್ಳುವಂತೆ ಅವರು ಸಲಹೆ ನೀಡಿದ್ದಾರೆ.

ಹವಾಮಾನ ಇಲಾಖೆ ಸೂಚನೆಗಳನ್ನು ನಿರಂತರವಾಗಿ ಗಮನಿಸುತ್ತಿರಬೇಕು. ಮನೆ ಅಥವಾ ಕಟ್ಟಡದ ಸೋರಿಕೆಯನ್ನು ತಡೆಗಟ್ಟಿ, ವಿದ್ಯುತ್ ವೈರಿಂಗ್ ಅನ್ನು ಸುರಕ್ಷಿತವಾಗಿರಿಸಿಕೊಳ್ಳಬೇಕು. ಬಲವಾದ ಗಾಳಿ ಮತ್ತು ಗುಡುಗು-ಸಿಡಿಲು ಇರುವಾಗ ಮನೆಯಲ್ಲೇ ಇರಿ, ಮರಗಳು ಅಥವಾ ವಿದ್ಯುತ್ ಕಂಬಗಳ ಕೆಳಗೆ ಹೋಗದಂತೆ ಸೂಚನೆ ನೀಡಿರುವ ಅವರು ತಗ್ಗು ಪ್ರದೇಶದಲ್ಲಿರುವವರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಲು ಹಾಗೂ ಪ್ರವಾಹ ಪೀಡಿತ ರಸ್ತೆಗಳು, ಜಲಾವೃತವಾದ ಸೇತುವೆಗಳು ಮತ್ತು ಮಲೆನಾಡಿನ ಕಣಿವೆ ಪ್ರದೇಶಗಳಲ್ಲಿ ವಾಹನಗಳನ್ನು ಚಲಾಯಿಸುವುದು ಬೇಡ ಎಂದವರು ಎಚ್ಚರಿಕೆ ನೀಡಿದ್ದಾರೆ.

ಈ ಅವಧಿಯಲ್ಲಿ ನಗರದಲ್ಲಿ ನಾಗರೀಕರಿಗೆ ಶುದ್ಧ ಕುಡಿಯುವ ನೀರು ಪೂರೈಸಲು, ಚರಂಡಿ ಮತ್ತು ರಾಜಾ ಕಾಲುವೆಗಳಲ್ಲಿ ನೀರು ನಿಲ್ಲದಂತೆ ಪಾಲಿಕೆ ಅಧಿಕಾರಿಗಳು ಗಮನಹರಿಸಬೇಕು. ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದು, ಅಗತ್ಯ ಆರೋಗ್ಯ ನೀಡಬೇಕು. ಅಗತ್ಯವಾಗಿರುವ ಔಷಧಗಳನ್ನು ದಾಸ್ತಾನು ಮಾಡಿಟ್ಟುಕೊಳ್ಳಬೇಕು ಎಂದು ಸೂಚಿಸಿದ ಅವರು, ಈ ಸಂದರ್ಭದಲ್ಲಿ ಹಾವುಗಳ ಕಡಿತಕ್ಕೆ ಸೂಕ್ತ ಚಿಕಿತ್ಸೆ ನೀಡಲು ಸಿದ್ಧರಾಗಿರುವಂತೆ ಅವರು ಸೂಚಿಸಿದರು.

ಕಂದಾಯ ಇಲಾಖೆಯ ಅಧಿಕಾರಿಗಳು ಅಗತ್ಯವಿದ್ದಲ್ಲಿ ನಿರಾಶ್ರಿತರ ವಸತಿಗೆ ಸೂಕ್ತವಾದ ಸ್ಥಳಗಳನ್ನು ಗುರುತಿಸಿಕೊಂಡಿರಬೇಕು.  ಅರಣ್ಯ ಇಲಾಖೆಯ ಅಧಿಕಾರಿಗಳು ದುರ್ಬಲ ಮತ್ತು ಒಣಗಿದ ಮರಗಳನ್ನು ತೆರವುಗೊಳಿಸಲು, ರೆಂಬೆ-ಕೊಂಬೆಗಳನ್ನು ಕತ್ತರಿಸಲು ಕ್ರಮ ಕೈಗೊಳ್ಳಬೇಕು. ಅಗ್ನಿಶಾಮಕದಳ, ಗ್ರಾಮ ಪಂಚಾಯಿತಿ, ಮೆಸ್ಕಾಂ ಸಿಬ್ಬಂಧಿಗಳು ಸನ್ನದ್ದ ಸ್ಥಿತಿಯಲ್ಲಿರಬೇಕು. ಅತೀವ ಮಳೆಯಿಂದ ಜನ-ಜಾನುವಾರುಗಳ ಸಾವು-ನೋವು, ಆಸ್ತಿ ಹಾನಿಯಾದಲ್ಲಿ, ಕೃಷಿ ಮತ್ತು ತೋಟಗಾರಿಕೆ ಬೆಳೆ ಹಾನಿಯಾದಲ್ಲಿ ತಕ್ಷಣದಲ್ಲಿ ಸರ್ವೇ ನಡೆಸಿ, ಸಕಾಲಿಕ ಪರಿಹಾರ ಕ್ರಮಗಳನ್ನು ಒದಗಿಸಲು ಸಿದ್ಧರಿರುವಂತೆ ಅವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್‌ವರಿಷ್ಟಾಧಿಕಾರಿ ಬಿ.ನಿಖಿಲ್‌, ಅರಣ್ಯಾಧಿಕಾರಿ ಅಜ್ಜಯ್ಯ, ಅಪರ ಜಿಲ್ಲಾಧಿಕಾರಿ ಅಭಿಷೇಕ್‌ವಿ. ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Heavy Rain Red Alert Issued for Shivamogga District

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor