Heavy rain today school leave / ಶಿವಮೊಗ್ಗ ಸೇರಿ 7 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್/ 1 ವಾರ ಭಾರೀ ಮಳೆ/ ಈ ಜಿಲ್ಲೆಗಳಲ್ಲಿ ಶಾಲೆಗೆ ರಜೆ

Malenadu Today
Heavy rain today school leave / ಶಿವಮೊಗ್ಗವೂ ಸೇರಿದಂತೆ ಇವತ್ತು ಬೆಳಗಾವಿ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. IMD ಬೆಂಗಳೂರು ಇದರ ಜಿಲ್ಲಾವಾರ ಅಲರ್ಟ್​ ಮ್ಯಾಪ್​ನಲ್ಲಿ ರಾಜ್ಯದ ಉಳಿದೆಲ್ಲಾ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್​ ನೀಡಲಾಗಿದೆ. ಭಾರಿ ಮಳೆಯಾಗವ ಮನ್ಸೂಚನೆ ನೀಡಲಾಗಿದೆ.

ಇನ್ನೂ  Karnataka State Natural Disaster Monitoring Centre ನ ಮಾಹಿತಿ ಪ್ರಕಾರ, ರಾಜ್ಯದ ಕೆರಾವಳಿ & ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 15 ರವರೆಗೆ ಜೋರಾದ ಗಾಳಿಯೊಂದಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆ ಹಾಗೂ ಅಲ್ಲಲ್ಲಿ ಅತಿ ಭಾರಿ ಮತ್ತು ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ #ರೆಡ್ಅಲರ್ಟ್ ನೀಡಲಾಗಿದೆ, ಇನ್ನುಳಿದ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಒಳನಾಡು ಜಿಲ್ಲೆಗಳಲ್ಲಿ ಇಂದು ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆ ಹಾಗೂ ಅಲ್ಲಲ್ಲಿ ಅತಿ ಭಾರಿ ಮತ್ತು ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ,

Heavy rain today school leave

ದಕ್ಷಿಣ ಕನ್ನಡ ಜಿಲ್ಲೆ: ಇಂದು (ಗುರುವಾರ) ಭಾರೀ ಮಳೆಯಾಗುವ ಸಾಧ್ಯತೆಯಿದೆ. ಎಲ್ಲಾ ಅಂಗನವಾಡಿಗಳಿಂದ ಹಿಡಿದು ಪ್ರೌಢಶಾಲೆಗಳವರೆಗೆ ರಜೆ ಘೋಷಿಸಲಾಗಿದೆ. ಸಿಬಿಎಸ್‌ಸಿ ಖಾಸಗಿ ಶಾಲೆಗಳಿಗೂ ಇದು ಅನ್ವಯಿಸುತ್ತದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಈ ಆದೇಶ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆ: ಇಂದು ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಮತ್ತು ಭಟ್ಕಳ ತಾಲೂಕುಗಳಲ್ಲಿ ರಜೆ ಇರುತ್ತದೆ. ಜಿಲ್ಲಾಧಿಕಾರಿ ಡಾ. ಲಕ್ಷ್ಮೀ ಪ್ರಿಯಾ ಅವರು ಆದೇಶಿಸಿದ್ದಾರೆ.

ಕರಾವಳಿ ಭಾಗದಲ್ಲಿ ಮಳೆ ಪರಿಸ್ಥಿತಿ: ಮಳೆ ಹೆಚ್ಚಾಗಿರುವುದರಿಂದ ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಕಾರವಾರ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಜೂನ್ 17ರವರೆಗೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

 @KarnatakaVarthe #ಎಚ್ಚರಿಕೆವಹಿಸಿ #ಸುರಕ್ಷಿತವಾಗಿರಿ #ಮುಂಗಾರುಮಳೆ #KSNDMC

ಮುಂದಿನ 7 ದಿನಗಳ #ಮಳೆ #ಮುನ್ಸೂಚನೆ & #ಎಚ್ಚರಿಕೆಗಳು: (ಮೂಲ: IMD)

Share This Article