ಶಿವಮೊಗ್ಗದಲ್ಲಿ ಭಾರೀ ಗಾಳಿ , ಮಳೆ, ಗುಡುಗು ಸಿಡಿಲು! ತೀರ್ಥಹಳ್ಳಿ ರಸ್ತೆಯಲ್ಲಿ ನೆಲಕ್ಕುರುಳಿದ ವಿದ್ಯುತ್ ಕಂಬ, ತೆಂಗಿನ ಮರ ! ಸಂಚಾರಕ್ಕೆ ತಡೆ

Malenadu Today

KARNATAKA NEWS/ ONLINE / Malenadu today/ May 11, 2023 GOOGLE NEWS  

ಶಿವಮೊಗ್ಗ/ ಜಿಲ್ಲೆಯಲ್ಲಿ ಮೋಚಾ ಚಂಡಮಾರುತ ಎಫೆಕ್ಟ್​ನಿಂದ ಭಾರೀ ಗಾಳಿ ಮಳೆಯಾಗುತ್ತಿದೆ. ಶಿವಮೊಗ್ಗ ನಗರದಲ್ಲಿಯೇ ಭಾರೀ ಗುಡುಗು ಸಿಡಿಲಿನ ಜೊತೆ ಗಾಳಿ ಮಳೆಯಾಗುತ್ತಿದೆ. ವಿಪರೀತ ಗಾಳಿಯಿಂದಾಗಿ ವಿದ್ಯುತ್​ ಕಂಬಗಳಿಗೆ ಹಾನಿಯಾಗುತ್ತಿದೆ. ಇನ್ನೂ ವರುಣನ ಅಬ್ಬರ ಜೋರಾಗಿದೆ. 

Malenadu Today

ನಾಳೆ ಮತ ಎಣಿಕೆ/ ಎಲೆಲ್ಲಿ 144 ಸೆಕ್ಷನ್​?/ ಎಷ್ಟು ಸುತ್ತು ನಡೆಯುತ್ತೆ ಕೌಂಟಿಂಗ್/  ಯಾವ ರೀತಿ ನಡೆಯುತ್ತೆ ! ವಿವರ ಇಲ್ಲಿದೆ

ಅತ್ತ ಜಿಲ್ಲೆಯ ವಿವಿಧ ತಾಲ್ಲೂಕಿನಲ್ಲಿ ಅಬ್ಬರದ ಮಳೆಯಾದ ಬಗ್ಗೆ ವರದಿಯಾಗಿದೆ. ವಿಪರೀತ ಎನ್ನುವಷ್ಟು ಗಾಳಿ ಬೀಸುತ್ತಿದ್ದು, ಮರಗಳಲ್ಲಿನ ಹಣ್ಣು ಕಾಯಿಗಳು ನೆಲಕ್ಕೆ ಬೀಳುತ್ತಿವೆ. ತೆಂಗಿನ ಮರಗಳಿಂದ ತೆಂಗಿನ ಕಾಯಿಗಳು ರಸ್ತೆ ಮೇಲೆ ಬೀಳುತ್ತಿವೆ. 

Malenadu Today

ಇನ್ನೂ ಮಳೆ ಹಾಗೂ ಗಾಳಿಯ ಅಬ್ಬರಕ್ಕೆ ತೀರ್ಥಹಳ್ಳಿ ರಸ್ತೆಯಲ್ಲಿ ವಿದ್ಯುತ್​ ಕಂಬಗಳು ಧರೆಗೆ ಉರುಳಿವೆ, ಇದರಿಂದಾಗಿ ರಸ್ತೆ ಸಂಚಾರ ತಾತ್ಕಾಲಿಕವಾಗಿ ಬಂದ್ ಆಗಿದೆ. ಗಾಜನೂರು ಸಮೀಪ ಹಳೆ ಹೊನ್ನಾಪುರದ ಬಳಿಯಲ್ಲಿ ತೆಂಗಿನ ಮರಗಳು ಹಾಗೂ ಅಡಿಕೆ ಮರಗಳು ರಸ್ತೆ ಮೇಲೆ ಉರುಳಿದೆ. ಅಲ್ಲದೆ ವಿದ್ಯುತ್ ಕಂಬಗಳು ರಸ್ತೆ ಮಧ್ಯೆ ತುಂಡಾಗಿ ಬಿದ್ದಿದೆ. ಪರಿಣಾಮ ತೀರ್ಥಹಳ್ಳಿಗೆ ಹೋಗುವ ರಸ್ತೆ ಸಂಚಾರಕ್ಕೆ ತಡೆಯಾಗಿದೆ. 

Malenadu Today

ಚೋರಡಿ ಅಪಘಾತ/  ಮತ್ತೊರ್ವ ಗಾಯಾಳು ಸಾವು!/ ಮೆಗ್ಗಾನ್​ಗೆ ಜೆಡಿಎಸ್ ಮುಖಂಡರ ಭೇಟಿ

ಶಿವಮೊಗ್ಗ/ ನಿನ್ನೆ ಚೋರಡಿಯಲ್ಲಿ  ಸಂಭವಿಸಿದ ಭೀಕರ ಅಪಘಾತದ ಘಟನೆಯಲ್ಲಿ ಸಾವನ್ನಪ್ಪಿರುವ ಸಂಖ್ಯೆ ಮೂರಕ್ಕೆ ಏರಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಇವತ್ತು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ಧಾರೆ. 

ಚೋರಡಿ ಅಪಘಾತ/ಅಮ್ಮಾ ರಾಘಣ್ಣ ಮಾತಾಡ್ತಿದ್ದೀನಿ! / ದೇವರಾದ ಮೆಗ್ಗಾನ್ ಸಿಬ್ಬಂದಿ/ ಜೀವಕ್ಕೆ ಜೀವ ಕೊಟ್ಟ ಶಿವಮೊಗ್ಗ ಜನ! ಕುಮದ್ವತಿ ಸೇತುವೆ  ಮೇಲೆ ನಡೆದ ಘಟನೆಯ ಪೂರ್ತಿ ಚಿತ್ರಣ 

ನಿನ್ನೆ ಸಂಜೆ ಸುಮಾರು ಆರು ಗಂಟೆಯ ಹೊತ್ತಿಗೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಇವತ್ತು ಶಿಕಾರಿಪುರ ತಾಲೂಕಿನ ಜೋಗಿಹಳ್ಳಿ ಗ್ರಾಮದ ಮಹೇಶ್ (45 ವರ್ಷ) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 

ಸಾರ್ವಜನಿಕರ ಗಮನಕ್ಕೆ/ ಮೇ 15 ರಂದು ಶಿವಮೊಗ್ಗದ ಈ ಭಾಗಗಳಲ್ಲಿ ಪವರ್ ಕಟ್ 

ಶಿವಮೊಗ್ಗ ಸಂತೆಕಡೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಭದ್ರಾ 1 ಮತ್ತು 2 ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿಯನ್ನು ಮೆಸ್ಕಾಂ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಮೆ 15 ರಂದು ಇಡೀ ದಿನ ವಿದ್ಯುತ್ ವ್ಯತ್ಯಯವಾಗಲಿದೆ. 

ಯಾವ್ಯಾವ ಭಾಗದಲ್ಲಿ ವಿದ್ಯುತ್ ಇರೋದಿಲ್ಲ

ಮೇ-15 ರ ಬೆಳಿಗ್ಗೆ 10 ರಿಂದ ಸಂಜೆ 04 ಗಂಟೆವರೆಗೆ ಸಂತೆಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಕಾಕನಹಸೂಡಿ, ಲಿಂಗಾಪುರ, ಸಿದ್ದಮ್ಮಾಜಿ ಹೊಸೂರು  ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ಚೋರಡಿಯಲ್ಲಿ ಅಪಘಾತ/ ಮೆಗ್ಗಾನ್​ ಆಸ್ಪತ್ರೆಗೆ ಬಿವೈ ರಾಘವೇಂದ್ರ, ಬಿ.ವೈ ವಿಜಯೇಂದ್ರ ದೌಡು/ಸಾವು ನೋವಿನ ಬಗ್ಗೆ ಎಸ್​ಪಿ ಮಿಥುನ್ ಕುಮಾರ್  ಕೊಟ್ಟ ನಿಖರ ಮಾಹಿತಿ ಇಲ್ಲಿದೆ 

ವಿದ್ಯಾರ್ಥಿಗಳು ಹಾಗೂ ಪೋಷಕರ ಗಮನಕ್ಕೆ! ಡಿಪ್ಲೋಮೋ ಕೋರ್ಸ್​ಗಳಿಗೆ ಅರ್ಜಿ ಆಹ್ವಾನ 

ಶಿವಮೊಗ್ಗ/  2023-24 ನೇ ಸಾಲಿನಲ್ಲಿ ಶಿರಾಳಕೊಪ್ಪದ ಶಿವಶರಣೆ ಅಕ್ಕಮಹಾದೇವಿ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್  ಸಂಸ್ಥೆಯಲ್ಲಿರುವ ಪ್ರಥಮ ಡಿಪ್ಲೋಮೊ ಕೋರ್ಸ್‍ಗಳಿಗೆ ಮೇರೆಗೆ ಪ್ರವೇಶ ಬಯಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

 ಎಸ್‍ಎಸ್‍ಎಲ್‍ಸಿ  ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳೊಂದಿಗೆ ಮೀಸಲಾತಿ ಬಯಸುವ ಅಭ್ಯರ್ಥಿಗಳು ತಮ್ಮ  ಮೀಸಲಾತಿಯ ಪೂರಕ ದಾಖಲಾತಿಗಳೊಂದಿಗೆ ಮೇ -31 ರೊಳಗಾಗಿ ಸಂಸ್ಥೆಗೆ ನೇರವಾಗಿ ಸಲ್ಲಿಸಿ ಪ್ರವೇಶವನ್ನು ಪಡೆಯುವಂತೆ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುವುದು  ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9480057999/9481066050/8867419851 ಗಳನ್ನು ಸಂಪರ್ಕಿಸುವುದು

———————–

ಚೋರಡಿಯಲ್ಲಿ ಭೀಕರ ಅಪಘಾತ/ ಇಷ್ಟಕ್ಕೂ ಹೇಗಾಯ್ತು ಆಕ್ಸಿಡೆಂಟ್ ? ಪ್ರತ್ಯಕ್ಷದರ್ಶಿ ಹೇಳಿದ್ದೇನು

ಶಿವಮೊಗ್ಗ/  ಕಾಣೆಯಾದವರ ಬಗ್ಗೆ ವಿವರ; ಮಾಹಿತಿ ನೀಡಲು ಮನವಿ

ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲುಸಾಲೆ ಮಳವಳ್ಳಿ ಗ್ರಾಮ ವಾಸಿ ಸದಾನಂದ ಎಂ.ಎಂ. ಎಂಬುವವರ ಪತ್ನಿ ಗೀತಾ (30 ವರ್ಷ) ಎಂಬ ಮಹಿಳೆಯು ಕಾಣೆಯಾಗಿದ್ಧಾರೆ. 

ತಮ್ಮ 11 ವರ್ಷದ ಮಗಳು ಪ್ರಿಯಾಂಕ ಹಾಗೂ 9 ವರ್ಷದ ಮಗ ಪ್ರಸಾದ್ ಇವರುಗಳನ್ನು ಕರೆದುಕೊಂಡು ದಿ: 11/04/2023 ರಿಂದ ಕಾಣೆಯಾಗಿದ್ದು, ಈವರೆಗೂ ವಾಪಾಸ್ಸಾಗಿರುವುದಿಲ್ಲ. 

ಚೋರಡಿ ಅಪಘಾತ/ಅಮ್ಮಾ ರಾಘಣ್ಣ ಮಾತಾಡ್ತಿದ್ದೀನಿ! / ದೇವರಾದ ಮೆಗ್ಗಾನ್ ಸಿಬ್ಬಂದಿ/ ಜೀವಕ್ಕೆ ಜೀವ ಕೊಟ್ಟ ಶಿವಮೊಗ್ಗ ಜನ! ಕುಮದ್ವತಿ ಸೇತುವೆ  ಮೇಲೆ ನಡೆದ ಘಟನೆಯ ಪೂರ್ತಿ ಚಿತ್ರಣ 

ಈಕೆಯ ಚಹರೆ ದುಂಡುಮುಖ, ಸಾಧಾರಣ ಮೈಕಟ್ಟು, 5 ಅಡಿ ಎತ್ತರ, ಎಡಕೆನ್ನೆಯ ಮೇಲೆ ಹಳೆ ಗಾಯದ ಗುರುತು ಇರುತ್ತದೆ.  ಕೆಂಪು ಬಣ್ಣದ ಚೂಡಿದಾರ್ ಧರಿಸಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾರೆ. 

ಈ ತಾಯಿ ಮಕ್ಕಳ ಸುಳಿವು ದೊರತಲ್ಲಿ ಕೂಡಲೇ ಹೊಸನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.  (ಫೋಟೋಗಳನ್ನು ಲಗತ್ತಿಸಿದೆ)

Read/ Bhadravati/  ಸಂಜೆ ಹೊತ್ತಿನಲ್ಲಿ ಮನೆಗೆ ನುಗ್ಗಿ ದರೋಡೆ! ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ರಾ ಪೊಲೀಸ್ 

Malenadutoday.com Social media

Share This Article