SHIVAMOGGA NEWS TODAY

ಹೆಗಲತ್ತಿ: ಶ್ರೀ ನಾಗಯಕ್ಷೆ ದೇವಾಲಯದಿಂದ ಎಸ್‌ಎಸ್‌ಎಲ್‌ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ, ಹೆಗಲತ್ತಿಯ ಶ್ರೀ ನಾಗಯಕ್ಷೆ ದೇವಾಲಯದ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

 ಶಿವಮೊಗ್ಗ : ಜಲ್​ ಜೀವನ್​ ಮಿಷನ್​ ಯೋಜನೆಯ ಲಕ್ಷಾಂತರ ರೂಪಾಯಿ ಮೌಲ್ಯದ ಪೈಪ್​ ಕದ್ದ ಕಳ್ಳ ಪೊಲೀಸರ ಬಲೆಗೆ?

ಹೆಗಲತ್ತಿಯಲ್ಲಿ ನಡೆದ ಈ ಕಾರ್ಯಕ್ರಮದ ನೇತೃತ್ವವನ್ನು ಶ್ರೀ ನಾಗಯಕ್ಷೆ ದೇವಾಲಯದ ಪ್ರಮುಖರಾದ ಕಲ್ಪನಾ ಅಮ್ಮನವರು ವಹಿಸಿದ್ದರು. ಈ ವರ್ಷದಿಂದ ಆರಂಭಿಸಲಾದ ಈ ವಿಶೇಷ ಕಾರ್ಯಕ್ರಮದಲ್ಲಿ, ಗ್ರಾಮೀಣ ಪ್ರದೇಶದ ಸುಮಾರು 20 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಕ್ಕಾಗಿ ಅವರನ್ನು ಗೌರವಿಸಿ, ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕಲ್ಪನಾ ಅಮ್ಮನವರು, ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿ, ಮುಂದಿನ ಅವರ ಶೈಕ್ಷಣಿಕ ಜೀವನವು ಉಜ್ವಲವಾಗಿರಲಿ ಎಂದು ಹಾರೈಸಿದರು.

Hegalatti Sri Nagayakashe Temple Felicitates

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.