ಅಪ್ರಾಪ್ತೆ ಬಳಿ ಕುಡಿಯೋಕೆ ನೀರು ಕೇಳಿ ತಪ್ಪು ಮಾಡಿದ ಯುವಕ! ದಾಖಲಾಯ್ತು ಕೇಸ್! ಗಾಂಧಿ ಬಜಾರ್ನಲ್ಲಿ ಸ್ನೇಹಿತೆಯನ್ನ ಕರೆದುಕೊಂಡು ಹೋಗುವಾಗ ಹಲ್ಲೆ!
Here are the details of the incidents that took place within the two stations of Shimoga districtಶಿವಮೊಗ್ಗ ಜಿಲ್ಲೆಯ ಎರಡು ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದ ಘಟನೆಗಳ ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Sep 7, 2023 SHIVAMOGGA NEWS
ಆಪ್ರಾಪ್ತೆಗೆ ಕಿರುಕುಳ! ಕೇಸ್ ದಾಖಲು
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಪೊಲೀಸ್ ಸ್ಟೇಷನ್ ಒಂದರಲ್ಲಿ ಯುವಕನೊಬ್ಬನ ವಿರುದ್ಧ ಪೋಕ್ಸೋ ಕಾಯ್ದೆ (Pocso Act) ಅಡಿ ಕೇಸ್ ದಾಖಲಾಗಿದೆ.
ಕುಡಿಯಲು ನೀರು ಕೇಳಿ ಬಾಲಕಿಯ ಮನೆಯೊಳಗೆ ನುಗ್ಗಿದ್ದ ಆರೋಪಿ, ಆಕೆಯ ಮೇಲೆ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಜೋರಾಗಿ ಕಿರುಚಿದ್ದಾಳೆ. ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಇನ್ನೂ ಘಟನೆ ಬೆನ್ನಲ್ಲೆ ಆರೋಪಿಯನ್ನು ಬಂಧಿಸುವಂತೆ ಪೋಷಕರು ಹಾಗೂ ಗ್ರಾಮಸ್ಥರು ಡಿವೈಎಸ್ಪಿ ಗೋಪಾಲಕೃಷ್ಣ ನಾಯ್ಕ್ರವರ ಬಳಿ ಒತ್ತಾಯಿಸಿದ್ದಾರೆ. ಸದ್ಯ ಆರೋಪಿ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಯುತ್ತಿದೆ.
ಗಾಂಧಿಬಜಾರ್ನಲ್ಲಿ ವ್ಯಕ್ತಿಯ ಮೇಲೆ ಹಲ್ಲೆ
ಹುಷಾರಿಲ್ಲದ ಸ್ನೇಹಿತೆಯನ್ನ ಆಸ್ಪತ್ರೆಗೆ ತೋರಿಸಿ ಬೈಕ್ನಲ್ಲಿ ಮನೆಗೆ ಬಿಡಲು ತೆರಳಿದ್ದ ವ್ಯಕ್ತಿಯೊಬ್ಬರ ಮೇಲೆ ಗಾಂಧಿಬಜಾರ್ನಲ್ಲಿ ಹಲ್ಲೆ ಮಾಡಲಾಗಿದೆ. ಯುವಕನೊಬ್ಬ ಬೈಕ್ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಸ್ಟೇಷನ್ನಲ್ಲಿ ಎಫ್ಐಆರ್ ಸಹ ದಾಖಲಾಗಿದೆ.
ಇನ್ನಷ್ಟು ಸುದ್ದಿಗಳು
-
ಬಾರ್ನಲ್ಲಿ ಎಣ್ಣೆ ಕೊಡ್ಲಿಲ್ಲ ಎಂದು ಸಿಬ್ಬಂದಿಯನ್ನ ಅಟ್ಟಾಡಿಸಿ ಹಲ್ಲೆ! ಬಿಹೆಚ್ ರೋಡ್ನಲ್ಲಿ ನಿನ್ನೆ ನಡೆದಿದ್ದೇನು?
-
ಸಚಿವರ ಶಾಕ್/ 48 ಗಂಟೆಯಲ್ಲಿ ಬದಲಾಯ್ತು ಶಿವಮೊಗ್ಗ AIRPORT ನಲ್ಲಿದ್ದ ಈ ವ್ಯವಸ್ಥೆ!