ಹೊರನಾಡು ದೇವಸ್ಥಾನಕ್ಕೆ ಹೋಗಿ ಬರುತ್ತಿದ್ದ ವೇಳೆ ಎರಡು ಕಾರುಗಳ ನಡುವೆ ಡಿಕ್ಕಿ | ಕುಡಿದು ಟೈಟಾಗಿ ಪತ್ನಿಯನ್ನ ಕೊಂದ ಗಂಡ |

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Oct 15, 2023 SHIVAMOGGA NEWS

ಕುಡಿದು ಟೈಟಾಗಿ ಪತ್ನಿಯನ್ನೆ ಪತಿಯೊಬ್ಬ ಕೊಲೆಗೈದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದಲ್ಲಿ ನಡೆದಿದೆ. 

ಪತ್ನಿಯನ್ನೆ ಕೊಂದ ಪತಿ

ಇಲ್ಲಿನ ನಿವಾಸಿ ಚಂದ್ರ ಕೊಲೆ ಮಾಡಿರುವ ವ್ಯಕ್ತಿ. ಪತ್ನಿ ಪದ್ಮಾಕ್ಷಿ ಜೊತೆಗೆ ಈತ ಆಗಾಗ ಜಗಳ ತೆಗೆಯುತ್ತಿದ್ದ. ಆಕೆಗೆ ಅನೈತಿಕ ಸಂಬಂಧ ಇದೆ ಎಂದು ಆರೋಪಿಸ್ತಿದ್ದ. ಇದೇ ವಿಚಾರಕ್ಕೆ ಗಲಾಟೆ ನಡೆದು.  ಕೊಡಲಿಯಿಂದ ಪತ್ನಿ ಮೇಲೆ ಹಲ್ಲೆ ಮಾಡಿ, ಆಕೆಯನ್ನ ಮನೆಯಿಂದ ಹೊರಹಾಕಿ ಮಲಗಿದ್ದಾನೆ. 

ಕುಡಿದ ಮತ್ತಿನಲ್ಲಿ ಪತ್ನಿಯ ಮೇಲೆ ಹಲ್ಲೆ ಮಾಡಿದ ಪತಿರಾಯ, ಬೆಳಗ್ಗೆ ಎದ್ದು ನೋಡುವಾಗ ಆಕೆ ಸಾವನ್ನಪ್ಪಿರುವುದು ಕಂಡು ಆತಂಕಗೊಂಡಿದ್ದಾನೆ. ಪತ್ನಿಯ ಶವದ ಮುಂದೆ ಕುಳಿತು ಕಣ್ಣೀರು ಹಾಕಿದ್ದಾನೆ. ಸದ್ಯ ಪ್ರಕರಣ ಸಂಬಂಧ ಗೋಣಿ ಬೀಡು ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

ಎರಡು ಕಾರುಗಳ ನಡುವೆ ಡಿಕ್ಕಿ

ಚಿಕ್ಕಮಗಳೂರು ಬಾಳೂರು ಹೋಬಳಿಯ ಸುಂಕಸಾಲೆ ಬಳಿ ಎರಡು ಕಾರುಗಳು ಪರಸ್ಪರ ಡಿಕ್ಕಿಯಾಗಿವೆ.  ಹೊರನಾಡು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ವಾಪಸ್​ ಬರುವಾಗ ಈ  ಘಟನೆ ಸಂಭವಿಸಿದೆ. ಘಟನೆಯಲ್ಲಿ ಕಾರುಗಳು ಜಖಂಗೊಂಡಿದ್ದು, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. 

 

 


ಇನ್ನಷ್ಟು ಸುದ್ದಿಗಳು 

  1. ಅಭಯ್ ಪ್ರಕಾಶ್ ಸಸ್ಪೆಂಡ್ ಪೊಲೀಸ್ ಇಲಾಖೆಯ ವೈಫಲ್ಯವೇ? ಹೀಗೆ ಮಾಡುವುದಾದರೆ ಹಲವರು ಅಮಾನತ್ತಲ್ಲಿರಬೇಕಿತ್ತಲ್ಲವೇ? ಯಾವ ತಪ್ಪಿಗೆ ಈ ಶಿಕ್ಷೆ? JP ಬರೆಯುತ್ತಾರೆ

  2. FACEBOOK , INSTAGRAM ಪೋಸ್ಟ್ ಹಾಕಬೇಕಾದರೆ ಹುಷಾರ್! ಬೀಳುತ್ತೆ ಕೇಸ್​! social media monitoring ಮಾಡುತ್ತಿದೆ ಶಿವಮೊಗ್ಗ ಪೊಲೀಸ್ ಇಲಾಖೆ

  3. ಈ ಹಾವು ನಿಮ್ಮ ಕಣ್ಣಿಗೆ ಬಿದ್ದಿತ್ತಾ? ಇದನ್ನ ಏನಂದು ಕರೆಯುತ್ತಾರೆ? ಈ ಹಾವಿನ ಮೈಮೇಲೆ ನೀರು ಇಂಗುತ್ತೆ ಗೊತ್ತಾ?


 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor