ಶೇ…ಹಾವು ಕಚ್ಚಿತು | ಮನೆ ಬಳಿ ಬಂದ ನಾಗರವನ್ನು ಹಿಡಿಯಲು ಹೋದವರ ಸ್ಥಿತಿ ಗಂಭೀರ | VIDEO VIRAL

KARNATAKA NEWS/ ONLINE / Malenadu today/ Oct 15, 2023 SHIVAMOGGA NEWS

ಹಾವುಗಳನ್ನು ಹಿಡಿಯುವಾಗ ಎಷ್ಟೆ ಹುಷಾರ್​ ಇದ್ದರೂ ಸಾಲದು. ಆಕಸ್ಮಿಕವಾಗಿ ಕಚ್ಚುವ ಹಾವುಗಳು ಜೀವವನ್ನೆ ತೆಗೆಯುತ್ತವೆ. ಇದಕ್ಕೆ ಸಾಕ್ಷಿ ಎಂಬಂತೆ ನಾಗರ ಹಾವನ್ನು ಹಿಡಿಯುವ ಸಂದರ್ಭದಲ್ಲಿ ಹಾವೊಂದು ಕಚ್ಚಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ಸೀರಿಯಸ್ ಆಗಿದ್ದಾರೆ. ಈ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ  ಸೆರೆಯಾಗಿದ್ದು, ಎಲ್ಲೆಡೆ ಹರಿದಾಡುತ್ತಿದೆ. 

ಹೊನ್ನಾವರ ತಾಲೂಕಿನ ಗುಂಡಬಾಳ ಹತ್ತಿರದ ಮನೆಯೊಂದರಲ್ಲಿ ನಡೆದ ಘಟನೆ ಇದಾಗಿದ್ದು, ಇಲ್ಲಿನ ಮನೆಯ ಬಳಿ ಕಾಣಿಸಿಕೊಂಡಿದ್ದ  ನಾಗರಹಾವನ್ನು ಅಬು ತಲಾ ಎಂಬವರು ಹಿಡಿಯುತ್ತಿದ್ರು. ಈ ವೇಳೆ ಅವರಿಗೆ ಹಾವು ಕಚ್ಚಿದೆ  

ಹಾವನ್ನು ಹಿಡಿಯುವಾಗ ಅಕಸ್ಮಾತಾಗಿ ಅಬು ತಲಾರವರ ಕೈಗೆ ಹಾವು ಕಚ್ಚಿದೆ. ತಕ್ಷಣ ಅವರು ಹಾವನ್ನ ಹಿಡಿದಿದ್ದಾರೆ. ಬಳಿಕ ಅವರನ್ನ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿಂದ ಉಡುಪಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಸ್ಥಿತಿ ಗಂಬೀರವಾಗಿದೆ ಎನ್ನಲಾಗುತ್ತಿದೆ.  


ಇನ್ನಷ್ಟು ಸುದ್ದಿಗಳು 

  1. ಅಭಯ್ ಪ್ರಕಾಶ್ ಸಸ್ಪೆಂಡ್ ಪೊಲೀಸ್ ಇಲಾಖೆಯ ವೈಫಲ್ಯವೇ? ಹೀಗೆ ಮಾಡುವುದಾದರೆ ಹಲವರು ಅಮಾನತ್ತಲ್ಲಿರಬೇಕಿತ್ತಲ್ಲವೇ? ಯಾವ ತಪ್ಪಿಗೆ ಈ ಶಿಕ್ಷೆ? JP ಬರೆಯುತ್ತಾರೆ

  2. FACEBOOK , INSTAGRAM ಪೋಸ್ಟ್ ಹಾಕಬೇಕಾದರೆ ಹುಷಾರ್! ಬೀಳುತ್ತೆ ಕೇಸ್​! social media monitoring ಮಾಡುತ್ತಿದೆ ಶಿವಮೊಗ್ಗ ಪೊಲೀಸ್ ಇಲಾಖೆ

  3. ಈ ಹಾವು ನಿಮ್ಮ ಕಣ್ಣಿಗೆ ಬಿದ್ದಿತ್ತಾ? ಇದನ್ನ ಏನಂದು ಕರೆಯುತ್ತಾರೆ? ಈ ಹಾವಿನ ಮೈಮೇಲೆ ನೀರು ಇಂಗುತ್ತೆ ಗೊತ್ತಾ?


 

Leave a Comment