BREAKING NEWS / ತೀರ್ಥಹಳ್ಳಿಯಲ್ಲಿ ಒಂದೇ ಮನೆಯಲ್ಲಿ ಮೂವರು ಸಜೀವ ದಹನ! ಅರ್ಚಕ ಕುಟುಂಬದಲ್ಲಿ ನಡೆದಿದ್ದೇನು?

Malenadu Today

KARNATAKA NEWS/ ONLINE / Malenadu today/ Oct 8, 2023 SHIVAMOGGA NEWS

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಬಳಿಯಲ್ಲಿ ಸಿಗುವ ಕೆಕೋಡ್​ ಎಂಬಲ್ಲಿ  ಭೀಕರ ಘಟನೆಯೊಂದು ಸಂಭವಿಸಿದೆ. ಮನೆಯಲ್ಲಿ ಬೆಂಕಿ ತಗಲಿ ಮೂವರು ಸಾವನ್ನಪ್ಪಿದ್ದಾರೆ. 

ತೀರ್ಥಹಳ್ಳಿ ತಾಲ್ಲೂಕಿನ ಹೊಸನಗರ ರಸ್ತೆ ಸಮೀಪ ಇರುವ ಅರಳಸುರಳಿ  ಗಣಪತಿ ಕಟ್ಟೆ ರೈಸ್​ ಮಿಲ್​  ಹತ್ತಿರ  ಇರುವ  ಮನೆಯೊಂದರಲ್ಲಿ ಈ ಘಟನೆ ಸಂಭವಿಸಿದೆ. 

ಮನೆಯ ಒಳಗಿನ ಕೋಣೆಯೊಳಗೆ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿಯಿಲ್ಲ. ಏನಾಗಿದೆ ಎಂಬುದರ ಬಗ್ಗೆಯು ಕೆಲವೊಂದು ಅನುಮಾನಗಳು ಮೂಡುತ್ತಿದೆ. ಪೊಲೀಸ್ ಇಲಾಖೆ ಈ ಬಗ್ಗೆ ಸ್ಪಷ್ಟತೆ ನೀಡಬೇಕಿದೆ  

ಈ ಬೆಂಕಿ ದುರಂತದಲ್ಲಿ ಕುಟುಂಬದ ಹಿರಿಯರಾದ ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (63), ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (34) ಸಜೀವವಾಗಿ ಬೆಂಕಿಗೆ ಆಹುತಿಯಾಗಿದ್ದಾರೆ. ಇನ್ನೋರ್ವ ಪುತ್ರ ಭರತ್ (33) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

 


ಇನ್ನಷ್ಟು ಸುದ್ದಿಗಳು 

  1.  R M MANJUNATH GOWDA ರವರ ಮನೆಗಳ ಮೇಲೆ ED ದಾಳಿಗೆ ಕಾರಣವೇನು? ಏನಿದು ಪ್ರಕರಣ?

  2. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು ಮಹತ್ವದ ಪ್ರಕಟಣೆ! ಶಿವಮೊಗ್ಗದಲ್ಲಿಯೇ ನೋಂದಣಿ ಮಾಡಿಕೊಳ್ಳಿ

  3. ಶಿವಮೊಗ್ಗ ಮತ್ತೆ ಆಗುತ್ತಾ ಪವರ್ ಸೆಂಟರ್! ನವರಾತ್ರಿ ನಂತರ ಏನಾಗುತ್ತೆ? ರಾಜ್ಯ ರಾಜಕಾರಣದ ಕುತೂಹಲದ ಸುದ್ದಿ


 

Share This Article