ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾದ್ಯಾಪಕರುಗಳ ಗುತ್ತಿಗೆ ಆಧಾರಿತ ಹುದ್ದೆಗಳ ನೇಮಕ ಸಂಬಂಧ ಫೆಬ್ರವರಿ 08 ರಂದು ಸಂದರ್ಶನ ನಡೆಯಲಿದೆ. ಪಶುವೈದ್ಯಕೀಯ ಸ್ತ್ರೀ ರೋಗ ಮತ್ತು ಪ್ರಸೂತಿ ಶಾಸ್ತ್ರ, ಪಶುವೈದ್ಯಕೀಯ ರೋಗಶಾಸ್ತ್ರ,, ಪಶುವೈದ್ಯಕೀಯ ಔಷಧ ಹಾಗೂ ವಿಷ ಶಾಸ್ತ್ರ, ವಿಭಾಗ, ಜಾನುವಾರು ಉತ್ಪನ್ನಗಳ ತಾಂತ್ರಿಕತೆ ವಿಭಾಗ, ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ ಮತ್ತು ಸಮುದಾಯ ರೋಗ ಅಧ್ಯಯನ ಶಾಸ್ತ್ರ, ವಿಭಾಗ, ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವ ರಸಾಯನ ಶಾಸ್ತ್ರ ವಿಭಾಗ, ಪ್ರಾಣಿ ಅನುವಂಶೀಯತೆ ಮತ್ತು ತಳಿ ಶಾಸ್ತ್ರ, ಪಶು ವೈದ್ಯಕೀಯ ಚಿಕಿತ್ಸಾ ಶಾಸ್ತ್ರ, ಪಶುವೈದ್ಯಕೀಯ ಸೂಕ್ಷ್ಮ ಜೀವಾಣು ಶಾಸ್ತ್ರ, ವಿಭಾಗ, ದೈಹಿಕ ಶಿಕ್ಷಣ ಮತ್ತು ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣದ ಪಶುವೈದ್ಯಕೀಯ ಚಿಕಿತ್ಸಾ ಶಾಸ್ತ್ರ, ಪಶುವೈದ್ಯಕೀಯ ಶಸ್ತ್ರ ಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ, ಚಿಕಿತ್ಸಾ ರೋಗಶಾಸ್ತ್ರ /ಸೂಕ್ಷ್ಮಜೀವಾಣು ಶಾಸ್ತ್ರ /ಪರೋಪಜೀವಿ ಶಾಸ್ತ್ರ, / ಜೀವರಸಾಯನ ಶಾಸ್ತ್ರ ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ.
ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಆಯ್ಕೆಯಾದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‍ಇಟಿ) ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ. 57,600/- ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆ ಪ್ರಮಾಣ ಪತ್ರ ಹೊಂದಿರದ ಅಭ್ಯರ್ಥಿಗಳಿಗೆ ಮಾಸಿಕ ರೂ.50,000/- ವೇತನವಾಗಿ ಪಾವತಿಸಲಾಗುವುದು. ಫೆಬ್ರವರಿ 08 ರ ಬೆಳಗ್ಗೆ 11 ಗಂಟೆಯಿಂದ ಡೀನ್ ಕಚೇರಿ, ಪಶು ವೈದ್ಯಕೀಯ ಮಹಾವಿದ್ಯಾಲಯ ಶಿವಮೊಗ್ಗ ಇಲ್ಲಿ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಜಾಲತಾಣ www.kvafsu.edu.in ಹಾಗೂ 08182-200872 ಸಂಪರ್ಕಿಸಬಹುದಾಗಿದೆ.
ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್ ಆರಂಭ
ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ದಿ: 05/02/2023 ರ ಭಾನುವಾರದಂದು 2022-23 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ “ಚಿಕ್ಕಲ್ ಶಿವನಪಾರ್ಕ್ ಹತ್ತಿರ, ಪೊಲೀಸ್ ಚೌಕಿ ಹತ್ತಿರ, ವಿನೋಬನಗರ, ರಾಜೇಂದ್ರನಗರ ಹಳೆ ಜೈಲ್ ಕಾಂಪೌಂಡ್ ಪಾರ್ಕ್ ಹತ್ತಿ, ಪದ್ಮಾ ಟಾಕೀಸ್ ಆಟೋನಿಲ್ದಾಣ ಹತ್ತಿರ ಹಾಗೂ ಗುಡ್‍ಲಕ್ ಸರ್ಕಲ್ ಸ್ವಾಮಿ ವಿವೇಕಾನಂದ ಬಡಾವಣೆ, ಶಿವಮೊಗ್ಗ”ಗಳಲ್ಲಿ ವಿಶೇಷ ನೀರಿನ ಕಂದಾಯ ವಸೂಲಾತಿ ಕೌಂಟರ್‍ಗಳನ್ನು ತೆರೆಯಲಾಗಿದೆ. ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸುವುದು ಅನಿವಾರ್ಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Good news : ಪೂರ್ಣಗೊಳ್ತಿರೋ ರೈಲ್ವೆ ಮೇಲ್ಸೇತುವೆ ಕಾಮಗಾರಿ! ವೈರಲ್ ಆಗ್ತಿದೆ ಈ ಸುದ್ದಿ!
ನಿರುಪಯುಕ್ತ ವಾಹನಗಳ ವಿಲೇವಾರಿ
ಶಿವಮೊಗ್ಗ ಜಿಲ್ಲಾ ಪೊಲೀಸ್ ಕಚೇರಿಯ ವಾಹನ ವಿಭಾಗಕ್ಕೆ ಸಂಬಂಧಿಸಿದ 7 ವಿವಿಧ ರೀತಿಯ ನಿರುಪಯುಕ್ತ ವಾಹನಗಳನ್ನು ಫೆ. 10 ರಂದು ಬೆಳಿಗ್ಗೆ 11 ಗಂಟೆಗೆ ಎಂ.ಎಸ್.ಟಿ.ಸಿ. ಆನ್‍ಲೈನ್ ತಂತ್ರಾಂಶದ ಮೂಲಕ ವಿಲೇವಾರಿ ಮಾಡಲಾಗುವುದು.ಬಿಡ್‍ನಲ್ಲಿ ಭಾಗವಹಿಸಲಿಚ್ಚಿಸುವವರು ಎಂಎಸ್‍ಟಿಸಿ ಆನ್‍ಲೈನ್ ತಂತ್ರಾಂಶದ ಮೂಲಕ ಬಿಡ್ ಮಾಡಬಹುದು. ಹೆಚ್ಚಿನ ಮಾಹಿತಿಗೆ ಸಶಸ್ತ್ರ ಮೀಸಲು ಕಚೇರಿ, ಸಾಗರ ರಸ್ತೆ, ಡಿಎಆರ್ ಶಿವಮೊಗ್ಗ ದೂ. ಸಂಖ್ಯೆ 08182-261412, ಮೊ.ಸಂ: 9480803306 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ಲೈಸನ್ಸ್ ನವೀಕರಣಕ್ಕೆ ಸೂಚನೆ
2013 ರಿಂದ 2023 ನೇ ಸಾಲಿಗೆ ಲೈಸನ್ಸ್ ಪಡೆದ ಕೃಷಿ ಉತ್ಪನ್ನ ಮಾರುಕಟ್ಟೆ ವರ್ತಕರ ಪರವಾನಿಗೆ ಅವಧಿಯು 2023 ರ ಮಾರ್ಚ್ 31 ರಂದು ಮುಕ್ತಾಯಗೊಳ್ಳಲ್ಲಿದ್ದು, ಲೈಸನ್ಸ್ ನವೀಕರಿಸಲು ಇಚ್ಛಿಸುವ ಪೇಟೆ ಕಾರ್ಯಕರ್ತರು ಫೆ.28 ರ ಒಳಗಾಗಿ ನಿಗದಿತ ಲೈಸನ್ಸ್ ಫಾರಂನ್ನು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ ಕಾರ್ಯದರ್ಶಿ, ಎಪಿಎಂಸಿ, ಶಿವಮೊಗ್ಗ ಮತ್ತು ಉಪನಿರ್ದೇಶಕರು, ಕೃಷಿ ಮಾರಾಟ ಇಲಾಖೆ, ಶಿವಮೊಗ್ಗ ಇವರಿಗೆ ಸಲ್ಲಿಸತಕ್ಕದ್ದು. ಫೆ.28 ರ ನಂತರ ಲೈಸೆನ್ಸ್‍ಗಳನ್ನು ನವೀಕರಿಸಲು ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಆದಕಾರಣ ಲೈಸನ್ಸ್ ನವೀಕರಣಗೊಳಿಸಿಕೊಳ್ಳುವುದರಿಂದ ಹೊರಗುಳಿದರೆ ಮುಂದಿನ ಕಾನೂನಾತ್ಮಕ ಪರಿಣಾಮಗಳಿಗೆ ತಾವೇ ನೇರ ಹೊಣೆಗಾರರಾಗಿರುತ್ತೀರಿ ಎಂದು ಶಿವಮೊಗ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ತಿಳಿಸಿರುತ್ತಾರೆ.
ಮೆಸ್ಕಾಂ ಜನ ಸಂಪರ್ಕ ಸಭೆ
ಮೆಸ್ಕಾಂ ಸೊರಬ ಉಪವಿಭಾಗ ಕಚೇರಿಯಲ್ಲಿ ಫೆ.03 ರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂ ಅಧಿಕಾರಿಗಳು ಪಾಲ್ಗೊಳ್ಳುವರು. ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರು ತಮ್ಮ ಅಹವಾಲುಗಳನ್ನು ನೀಡಿ ಈ ಸಭೆಯ ಸದುಪಯೋಗ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಮೊ.ಸಂ: 9448289518 ನ್ನು ಸಂಪರ್ಕಿಸಬಹುದೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
