ಶಿವಮೊಗ್ಗದಲ್ಲಿ ಈ ಹಿಂದೆ ಸಾರ್ವಕರ್ ವಿಚಾರದಲ್ಲಿ ಚರ್ಚೆಗೆ ಗ್ರಾಸವಾಗಿ ಬಂಧನಕ್ಕೆ ಒಳಗಾಗಿದ್ದ ಎಂಡಿ ಷರೀಫ್ ಮತ್ತೆ ಅರೆಸ್ಟ್ ಆಗಿದ್ದಾರೆ. ಇತ್ತೀಚೆಗೆ ಷರೀಫ್ ಪತ್ನಿ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಪಡೆದುಕೊಂಡಿದ್ದರು. ಅದರ ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಉಡುಗೊರೆಯಾಗಿ ಬಂದ ಟಿಪ್ಪು ಸುಲ್ತಾನ್ ಫೋಟೋವನ್ನ ಕಚೇರಿಯಲ್ಲಿ ಹಾಕಲಾಗಿತ್ತು. ಇದು ಹಿಂದೂ ಸಂಘಟನೆಗಳ ಅಸಮಾಧಾನಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೆ ಪ್ರಕರಣವೊಂದರ ಸಂಬಂಧ ಷರೀಫ್ ಅರೆಸ್ಟ್ ಆಗಿದ್ದಾರೆ. ಇದಕ್ಕೆ ಕಾರಣವಾಗಿರುವುದು ತುಂಗಾನಗರ ಪೊಲೀಸ್ ಸ್ಟೇಷನ್ನಲ್ಲಿ ದಾಖಲಾಗಿರುವ ಒಂದು ಕೇಸ್.
ನಡೆದಿದ್ದೇನು?
ದಾಖಲಾಗಿರುವ ಪ್ರಕರಣದಲ್ಲಿ ಟಿಪ್ಪು ನಗರದ ನಿವಾಸಿ ಸಹೆರಾ ಇಮ್ರಾನ್ ಎಂಬವರ ಜಾಗದಲ್ಲಿ ಹಾಕಲಾಗಿದ್ದ ಕಾಂಪೌಂಡ್ ಗೋಡೆಯನ್ನು ಒಡೆದು ಹಲ್ಲೆಗೆ ಯತ್ನಿಸಿದ ಆರೋಪಗಳಿವೆ. ಈ ಸಂಬಂಧ ತುಂಗಾ ನಗರ ಪೊಲೀಸ್ ಸ್ಟೇಷನ್ನಲ್ಲಿ ಎರಡು ದಿನದ ಹಿಂದೆ ಎಫ್ಐಆರ್ ದಾಖಲಾಗಿದ್ದು, ಸದ್ಯ ಇದೇ ವಿಚಾರವಾಗಿ ಷರೀಫ್ರನ್ನ ಬಂಧಿಸಲಾಗಿದೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com