Hevay rain :ಜೋರು ಮಳೆ. ಜಿಲ್ಲೆಯ 02 ತಾಲೂಕುಗಳಿಗೆ ನಾಳೆ ರಜೆ
ಭಾರಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯ ಹೊಸನಗರ ಮತ್ತು ಸಾಗರ ತಾಲ್ಲೂಕುಗಳಲ್ಲಿ ನಾಳೆ (ಆಗಸ್ಟ್ 28) ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಆಯಾ ತಾಲ್ಲೂಕುಗಳ ತಹಶೀಲ್ದಾರ್‌ಗಳು ಆದೇಶ ಹೊರಡಿಸಿದ್ದಾರೆ.
ನಿರಂತರ ಮಳೆಯಿಂದಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಅಂಗನವಾಡಿ ಕೇಂದ್ರಗಳು, ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ. ಮುಂದಿನ ದಿನಗಳಲ್ಲಿ ರಜೆಯ ಬದಲಿಗೆ ತರಗತಿಗಳನ್ನು ನಡೆಸಿ ಪಠ್ಯಕ್ರಮ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.
- Advertisement -
TAGGED:Hevay rain

