Shivamogga | ಶಿವಮೊಗ್ಗ ಪಾಲಿಕೆ ಚುನಾವಣೆಯ ಬಗ್ಗೆ ಮತ್ತೊಂದು ಅಪ್ಡೇಟ್ ಸುದ್ದಿ ಬಂದಿದೆ. ಶಿವಮೊಗ್ಗ ಮಹಾನಗರ ಪಾಲಿಕೆಗೆ ಚುನಾವಣೆ ನಡೆಸದ ಸರ್ಕಾರದ ಕ್ರಮದ ಬಗ್ಗೆ ಹೈಕೋರ್ಟ್ ಉತ್ತರ ನಿರೀಕ್ಷಿಸಿದೆ. ಈ ಕುರಿತು ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಾಲಯ, ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿ ತುರ್ತು ವಿವರಣೆ ಕೋರಿದೆ.
ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಕೆ.ಇ. ಕಾಂತೇಶ್ ಈ ಸಂಬಂಧ ಪಿಐಎಲ್ ದಾಖಲಿಸಿದ್ದರು.
ಪಿಐಎಲ್ನ್ನ ವಿಚಾರಣೆಗೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರೂ ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂನಾಚಾ ಅವರಿದ್ದ ವಿಭಾಗೀಯ ನ್ಯಾಯಪೀಠ, ಶಿವಮೊಗ್ಗ ಮಹಾನಗರ ಪಾಲಿಕೆಗೂ ಸಹ ತನ್ನ ನಿಲುವನ್ನು ಸ್ಪಷ್ಟಪಡಿಸಲು ಆದೇಶಿಸಿದೆ.

ಪಿಐಎಲ್ನ ವಾದ
- ಶಿವಮೊಗ್ಗ ಪಾಲಿಕೆಗೆ ಕೊನೆಯ ಬಾರಿಗೆ ಚುನಾವಣೆ ನಡೆದಿದ್ದು 2018ರ ಆಗಸ್ಟ್ 31ರಂದು. ಇದರ ಐದು ವರ್ಷಗಳ ಅವಧಿಯು 2023ರ ಆಗಸ್ಟ್ 30ಕ್ಕೆ ಕೊನೆಗೊಂಡಿದೆ.
- ಸಂವಿಧಾನದ ವಿಧಿ 243E ಮತ್ತು 243U ಅಡಿಯಲ್ಲಿ, ಅಧಿಕಾರ ಅವಧಿ ಮುಗಿದ ಆರು ತಿಂಗಳೊಳಗೆ ಕಡ್ಡಾಯವಾಗಿ ಚುನಾವಣೆ ನಡೆಸಬೇಕಾದದ್ದು ಆಯೋಗದ ಜವಾಬ್ದಾರಿಯಾಗಿದೆ.
- ಆದರೆ, ಪಾಲಿಕೆಯ ಅವಧಿ ಮುಗಿದು ಬರೋಬ್ಬರಿ ಎರಡೂವರೆ ವರ್ಷಗಳೇ ಕಳೆದಿದ್ದರೂ ಸರ್ಕಾರ ಮತ್ತು ಆಯೋಗ ಮೌನಕ್ಕೆ ಶರಣಾಗಿರುವುದು ಸಂವಿಧಾನದ ಉಲ್ಲಂಘನೆಯಾಗಿದೆ .
- ಪಾಲಿಕೆಯಲ್ಲಿ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತಾಧಿಕಾರಿಗಳ ಆಳ್ವಿಕೆ ನಡೆಯುತ್ತಿರುವುದರಿಂದ ನಗರದ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿವೆ.
- ಈ ಎಲ್ಲಾ ಕಾರಣಕ್ಕೆ ಹೈಕೋರ್ಟ್ ಮಧ್ಯಪ್ರವೇಶಿಸಿ ಚುನಾವಣಾ ಅಧಿಸೂಚನೆ ಹೊರಡಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು PILನಲ್ಲಿ ಕೋರಲಾಗಿತ್ತು

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
