SHIVAMOGGA NEWS TODAY

ಮಕ್ಕಳ ಅಶ್ಲೀಲ ವಿಡಿಯೋ ಫೋನ್‌ನಲ್ಲಿದ್ದರೆ ಜೈಲು ಶಿಕ್ಷೆ ಫಿಕ್ಸ್​ : ಹೈಕೋರ್ಟ್ ಮಹತ್ವದ ತೀರ್ಪು

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

High Court ಬೆಂಗಳೂರು : ಮಕ್ಕಳ ಅಶ್ಲೀಲ ಚಿತ್ರ ಅಥವಾ ವಿಡಿಯೋಗಳನ್ನು ಮೊಬೈಲ್‌ನಲ್ಲಿ ಸಂಗ್ರಹಿಸಿಡುವುದು ಕೇವಲ ವೈಯಕ್ತಿಕ ವಿಚಾರವಲ್ಲ, ಅದು ಪೋಕ್ಸೋ ಮತ್ತು ಐಟಿ ಕಾಯ್ದೆಯಡಿ ಗಂಭೀರ ಅಪರಾಧ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಈ ಮೂಲಕ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಕಾನೂನು ಇನ್ನಷ್ಟು ಕಠಿಣವಾಗಿದೆ ಎಂಬ ಸಂದೇಶ ರವಾನಿಸಿದೆ. 

ಶಿವಮೊಗ್ಗದಲ್ಲಿ ನಾಳೆಯಿಂದ ಹೋಟೆಲ್ ಬಂದ್?

ಕೇರಳದ ತ್ರಿಶೂರು ಮೂಲದ ಬಿಜೋಯ್ ಎಂಬ ವ್ಯಕ್ತಿಯು ತನ್ನ ಮೊಬೈಲ್‌ನಲ್ಲಿ ಮಕ್ಕಳ ಅಶ್ಲೀಲ ದೃಶ್ಯಗಳನ್ನು ಹೊಂದಿದ್ದಕ್ಕಾಗಿ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದನು. ನಾನು ಈ ವಿಡಿಯೋಗಳನ್ನು ಯಾರಿಗೂ ಹಂಚಿಕೊಂಡಿಲ್ಲ, ಕೇವಲ ಸಂಗ್ರಹಿಸಿಟ್ಟಿದ್ದೇನೆ ಎಂಬ ಆತನ ವಾದವನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು ಸಂಪೂರ್ಣವಾಗಿ ತಿರಸ್ಕರಿಸಿದೆ. 

ಪೋಕ್ಸೋ ಕಾಯ್ದೆ -2012ರ ಸೆಕ್ಷನ್ 15 ಮತ್ತು ಐಟಿ ಕಾಯ್ದೆಯ ಸೆಕ್ಷನ್ 67(ಬಿ) ಅಡಿಯಲ್ಲಿ, ಅಶ್ಲೀಲ ವಿಷಯಗಳನ್ನು ಪ್ರಸಾರ ಮಾಡುವುದು ಮಾತ್ರವಲ್ಲದೆ, ಅಂತಹ ಸಾಮರ್ಥ್ಯವಿರುವ ಫೋಟೋ ಅಥವಾ ವಿಡಿಯೋಗಳನ್ನು ಡಿಜಿಟಲ್ ರೂಪದಲ್ಲಿ ಶೇಖರಿಸಿಡುವುದು ಕೂಡ ಶಿಕ್ಷಾರ್ಹ ಅಪರಾಧ ಎಂದು ನ್ಯಾಯಾಲಯ ಹೇಳಿದೆ. 

ಈ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಹಿಂದಿನ ತೀರ್ಪುಗಳನ್ನು ಉಲ್ಲೇಖಿಸಿದ ಹೈಕೋರ್ಟ್, ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದೆ. 

High Court Storing Child Pornography is a Crime

High Court Sharavathi Pumped Storage Project Legal Issue
High Court
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.