ಶಿಕಾರಿಪುರ ಗ್ರಾಮಾಂತರ ಠಾಣೆ ಕೇಸ್​, ಮಹತ್ವದ ಆದೇಶ ನೀಡಿದ ಹೈಕೋರ್ಟ್​ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಪೀಠ

High Court /ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ಒಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗುವ ದೂರು ಹಾಗೂ ಪ್ರತಿದೂರುಗಳ ತನಿಖೆಯನ್ನು ಕಡ್ಡಾಯವಾಗಿ ಒಬ್ಬರೇ ತನಿಖಾಧಿಕಾರಿ ನಡೆಸಬೇಕು ಅಂತಾ ಹೈಕೋರ್ಟ್ ಸೂಚಿಸಿದೆ. ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್​ ಪೊಲೀಸ್​ ಇಲಾಖೆಗೆ ಮಹತ್ವದ ಸೂಚನೆ ನೀಡಿದೆ. 

 High Court Warns Over Counter Complaints /ದೂರು ಮತ್ತು ಪ್ರತಿದೂರಿನ ತನಿಖೆಯನ್ನು ಒಬ್ಬರೇ ತನಿಖಾಧಿಕಾರಿ ನಡೆಸಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ
 High Court Warns Over Counter Complaints /ದೂರು ಮತ್ತು ಪ್ರತಿದೂರಿನ ತನಿಖೆಯನ್ನು ಒಬ್ಬರೇ ತನಿಖಾಧಿಕಾರಿ ನಡೆಸಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಇಲ್ಲಿನ ಅರ್ಜಿದಾರರೊಬ್ಬರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಬಗ್ಗೆ ಸೂಚನೆ ನೀಡಿದೆ.

ಹೈಕೋರ್ಟ್​ನಲ್ಲಿ ಪಿಐಎಲ್!​ ಸರ್ಕಾರಕ್ಕೆ ಶಿವಮೊಗ್ಗ ಪಾಲಿಕೆ ಕುರಿತು ನೋಟಿಸ್ ಜಾರಿ! ಪೂರ್ತಿ ವಿವರ ಇಲ್ಲಿ ಓದಿ

ವಿಚಾರಣೆಯ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರು, ದೂರು ಹಾಗೂ ಪ್ರತಿದೂರಿನ ತನಿಖೆಗಾಗಿ ಇಬ್ಬರು ಪ್ರತ್ಯೇಕ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು. ಇದನ್ನ ಗಮನಿಸಿದ ಪೀಠ ಸರ್ಕಾರದ ಮಟ್ಟದಲ್ಲಿ ಸುತ್ತೋಲೆ ಹೊರಡಿಸಿದ್ದರೂ ಸಹ, ಒಂದೇ ಘಟನೆಯ ದೂರು ಮತ್ತು ಪ್ರತಿದೂರಿಗೆ ಇಬ್ಬರು ಪ್ರತ್ಯೇಕ ತನಿಖಾಧಿಕಾರಿಗಳನ್ನು ನೇಮಕ ಮಾಡುತ್ತಿರುವ ಬಗ್ಗೆ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿತು

ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರನ್ನು ಪ್ರಶ್ನಿಸಿ, ದೂರು ಮತ್ತು ಪ್ರತಿದೂರಿನ ತನಿಖೆಯನ್ನು ಒಬ್ಬರೇ ಅಧಿಕಾರಿ ಮಾಡಬೇಕು ಎಂದು ಎಷ್ಟು ಬಾರಿ ನಿರ್ದೇಶನ ನೀಡಬೇಕು ಎಂದು ಪ್ರಶ್ನಿಸಿತು.

ಅಲ್ಲದೆ ಒಂದೇ ಪ್ರಕರಣದಲ್ಲಿ ಇಬ್ಬರು ಅಧಿಕಾರಿಗಳು ತನಿಖೆ ನಡೆಸುವುದರಿಂದ ಭಿನ್ನಾಭಿಪ್ರಾಯಗಳು ಮೂಡುತ್ತವೆ ಹಾಗೂ ಒಬ್ಬರು ಬಿ ರಿಪೋರ್ಟ್ ನೀಡಿದರೆ, ಮತ್ತೊಬ್ಬರು ಆರೋಪ ಪಟ್ಟಿ ಸಲ್ಲಿಕೆ ಮಾಡುತ್ತಾರೆ ಎಂದು ನ್ಯಾಯಮೂರ್ತಿಗಳು  ಆತಂಕ ವ್ಯಕ್ತಪಡಿಸಿದರು. ಅಲ್ಲದೆ ಇದೇ ಪ್ರವೃತ್ತಿ ಮುಂದುವರಿದರೇ, ನ್ಯಾಯಾಂಗ ನಿಂದನೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. 

 High Court Warns Over Counter Complaints /ದೂರು ಮತ್ತು ಪ್ರತಿದೂರಿನ ತನಿಖೆಯನ್ನು ಒಬ್ಬರೇ ತನಿಖಾಧಿಕಾರಿ ನಡೆಸಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ
 High Court Warns Over Counter Complaints /ದೂರು ಮತ್ತು ಪ್ರತಿದೂರಿನ ತನಿಖೆಯನ್ನು ಒಬ್ಬರೇ ತನಿಖಾಧಿಕಾರಿ ನಡೆಸಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ
 High Court Warns Over Counter Complaints

ಜೀವಾವಧಿ ಶಿಕ್ಷೆಗೆ ಒಳಗಾದ ಇಬ್ಬರು ಖೈದಿಗಳ ನಡುವೆ ಪ್ರೇಮಾಂಕುರ. ಮದುವೆಗೆ ಕೋರ್ಟ್​ನಲ್ಲಿ ಪಡೆದ್ರು ಪೆರೋಲ್

ಇನ್ನು ಪ್ರಕರಣದ ವಿಚಾರವಾಗಿ ಪ್ರಕರಣದಲ್ಲಿ ಎರಡೂ ದೂರುಗಳಿಗೆ ಸಂಬಂಧಿಸಿದಂತೆ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಆದರೆ, ಪ್ರತ್ಯೇಕ ಅಧಿಕಾರಿಗಳಿಂದ ತನಿಖೆ ನಡೆದಿರುವುದು ಕಾನೂನಿನ ಆಶಯಕ್ಕೆ ವಿರುದ್ಧವಾಗಿದೆ.

ಹೀಗಾಗಿ, ಈ ಇಡೀ ಪ್ರಕರಣವನ್ನು ಹೊಸದಾಗಿ ತನಿಖೆಗೆ ಒಳಪಡಿಸುವ ಅಗತ್ಯವಿದೆ ಎಂದು ಪೀಠವು ಅಭಿಪ್ರಾಯಪಟ್ಟಿದೆ. ಒಬ್ಬರೇ ತನಿಖಾಧಿಕಾರಿಯು ಕೇವಲ 1 ತಿಂಗಳ ಒಳಗೆ ಮರು ತನಿಖೆ ಪೂರ್ಣಗೊಳಿಸಿ, ಸಕ್ಷಮ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಬೇಕು ಎಂದು ಆದೇಶ ಹೊರಡಿಸಿದೆ.

 High Court Warns Over Counter Complaints /ದೂರು ಮತ್ತು ಪ್ರತಿದೂರಿನ ತನಿಖೆಯನ್ನು ಒಬ್ಬರೇ ತನಿಖಾಧಿಕಾರಿ ನಡೆಸಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ
 High Court Warns Over Counter Complaints /ದೂರು ಮತ್ತು ಪ್ರತಿದೂರಿನ ತನಿಖೆಯನ್ನು ಒಬ್ಬರೇ ತನಿಖಾಧಿಕಾರಿ ನಡೆಸಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ

BREAKING / ಶರಾವತಿ ಮು.ಳುಗಡೆ ಸಂತ್ರಸ್ತರಿಗೆ ರಿಲೀಫ್ ಕೊಟ್ಟ ಹೈಕೋರ್ಟ್

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 