ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ! ವಾಹನಗಳ ಸಂಚಾರದಲ್ಲಿ ಬದಲಾವಣೆ ಮಾಡಿ ಜಿಲ್ಲಾಡಳಿತ ಆದೇಶ! ಎಲ್ಲೆಲ್ಲಿ ಏನೇನು?

Hindu Mahasabha Ganapati procession! District administration order to change the traffic of vehicles! what whereಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ! ವಾಹನಗಳ ಸಂಚಾರದಲ್ಲಿ ಬದಲಾವಣೆ ಮಾಡಿ ಜಿಲ್ಲಾಡಳಿತ ಆದೇಶ! ಎಲ್ಲೆಲ್ಲಿ ಏನೇನು? hindu mahasabha ganapathi shivamogga 2023,

ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ! ವಾಹನಗಳ ಸಂಚಾರದಲ್ಲಿ ಬದಲಾವಣೆ ಮಾಡಿ ಜಿಲ್ಲಾಡಳಿತ ಆದೇಶ! ಎಲ್ಲೆಲ್ಲಿ ಏನೇನು?

KARNATAKA NEWS/ ONLINE / Malenadu today/ Sep 24, 2023 SHIVAMOGGA NEWS’

ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು  (Hindu Mahasabha Ganapati) ದಿನಾಂಕ:28,9,2023 ರಂದು ಮರವಣಿಗೆಯ ಮೂಲಕ ವಿಸರ್ಜನೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಹಾಗೂ ಪಾರ್ಕಿಂಗ್ ವ್ಯವಸ್ಥೆ ಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಪ್ರಮುಖ ಪ್ರಕಟಣೆಯೊಂದು ಹೊರಡಿಸಿದೆ. 

ಅದರ ವಿವರವನ್ನು ನೋಡುವುದಾದರೆ, ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವವು (hindu mahasabha ganapathi shivamogga 2023,) ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಎಸ್.ಪಿ.ಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಟಿ ಪಾರ್ಕ್, ಗಾಂಧಿಬಜಾರ್ ಮುಖ್ಯ ರಸ್ತೆ ಎಸ್.ಎನ್ ಸರ್ಕಲ್, ಬಿ.ಹೆಚ್ ರಸ್ತೆ ಮುಖಾಂತರ ಎ.ಎ ಸರ್ಕಲ್,ನೆಹರು ರಸ್ತೆ ಮುಖಾಂತರವಾಗಿ ಗೋಪಿ ಸರ್ಕಲ್ ದುರ್ಗಿಗುಡಿ ಮುಖ್ಯ ರಸ್ತೆಯಿಂದ ಜೈಲು ಸರ್ಕಲ್,ಕುವೆಂಪು ರಸ್ತೆ ಮಾರ್ಗವಾಗಿ ಶಿವಮೂರ್ತಿ ಸರ್ಕಲ್,ಸವಳಂಗ ಮುಖ್ಯ ರಸ್ತೆ ಮಾರ್ಗವಾಗಿ ಮಹಾವೀರ ಸರ್ಕಲ್‌,ಡಿವಿಎಸ್ ಸರ್ಕಲ್,ಕಾನ್ವೆಂಟ್ ರಸ್ತೆ .ಬಿ.ಹೆಚ್ ರಸ್ತೆ,ಪೊಲೀಸ್‌ ಕಾರ್ನರ್,ಕೋಟೆ ಪೊಲೀಸ್ ಠಾಣೆ ರಸ್ತೆ,ಕೋಟೆ ರಸ್ತೆ ಮಾರ್ಗವಾಗಿ ಭೀಮೇಶ್ವರ ದೇವಸ್ಥಾನಕ್ಕೆ ಬರಲಿದೆ. ಅಲ್ಲಿಯೇ ಇರುವ ತುಂಗಾನದಿಯಲ್ಲಿ ಗಣಪತಿಯ ವಿಸರ್ಜನೆ ಮಾಡಲಾಗುತ್ತದೆ. 

ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ.  ಈ ಹಿನ್ನೆಲೆಯಲ್ಲಿ  ಸಂಚಾರ ಸುಗಮಗೊಳಿಸುವ ಸಲುವಾಗಿ  ವಾಹನ ಸಂಚಾರ ನಿಷೇಧ, ವಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕವಾಗಿ ಅಧಿಸೂಚನೆ ಹೊರಡಿಸಲಾಗಿದೆ. 

ಹಿಂದೂ ಮಹಾಸಭಾ ಗಣಪತಿಯ ಮೆರವಣಿಗೆ ಮಾರ್ಗದಲ್ಲಿ ಮತ್ತು ಮಾರ್ಗದ ಸುತ್ತ ಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಹಾಗೂ ನಿಲುಗಡೆ ನಿಷೇಧಿಸಿದೆ

ಭದ್ರಾವತಿ, ಬೆಂಗಳೂರು ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ಬಸ್ ಗಳು ಎಂ.ಆರ್.ಎಸ್. ಸರ್ಕಲ್ ಬೈಪಾಸ್ ರಸ್ತೆ ಮುಖಾಂತರ ಹೋಗುವುದಕ್ಕೆ ಅವಕಾಶ ಕಲ್ಪಿಸಲಾಗಿದೆ 

ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರಿ ವಾಹನ, ಮತ್ತು ಬಸ್ ಗಳು ಎಂ.ಆರ್ .ಏಸ್ ಸರ್ಕಲ್ ಮಾರ್ಗವಾಗಿ ಟ್ರೈಪಾಸ್‌ ರಸ್ತೆ ಮುಖಾಂತರ ಹೋಗಬಹದು

ಹೊನ್ನಾಳಿ, ಹರಿಹರ, ದಾವಣಗೆರೆಯಿಂದ ಬರುವ ಮತ್ತು ಹೋಗುವ ಎಲ್ಲಾ ಭಾರಿ ವಾಹನ ಮತ್ತು ಬಸ್ ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್‌ ಶಂಕರಮಠ ಸರ್ಕಲ್, ಹೊಳೆಹೊನ್ನೂರು ಸರ್ಕಲ್‌, ವಿದ್ಯಾನಗರ ಎಂ.ಆರ್, ಎಸ್‌. ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರವಾಗಿ ಹೋಗುವುದು

ಕೋಟೆ ರಸ್ತೆ ಮತ್ತು ಓಲ್ಡ್‌ ಬಾರ್ ಲೈನ್ ರಸ್ತೆಯಲ್ಲಿ ಎಲ್ಲಾ ವಾಹನಗಳ ಸಂಚಾರ ನಿಷೇಧಿಸಲಾಗಿದೆ 

ಕೆ.ಎಸ್.ಆರ್.ಟಿ.ಸಿ. ಮತ್ತು ಖಾಸಗಿ ಬಸ್‌ ನಿಲ್ದಾಣದಿಂದ ಹೊನ್ನಾಳಿ ಶಿಕಾರಿಪುರ ಸೊರಬ ಹರಿಹರ,ದಾವಣಗೆರೆ ಹೋಗುವ ಎಲ್ಲಾ ಬಸ್ ಗಳು ಮತ್ತು ಭಾರಿ ಸರಕು ವಾಹನಗಳು ಸಾಗರ ರಸ್ತೆ ಮುಖಾಂತರವಾಗಿ ಹೆಲಿಪ್ಯಾಡ್ ಸರ್ಕಲ್‌  ಆಲ್ಕೋಳ ಸರ್ಕಲ್- ಪೊಲೀಸ್ ಚೌಕಿ - ರಾಜ್ ಕುಮಾರ್ ಸರ್ಕಲ್ ಬೊಮ್ಮನಕಟ್ಟೆ ಮುಖಾಂತರ ಸವಳಂಗ ರಸ್ತೆಗೆ ಹೋಗುವುದು.

ಕೆ.ಎಸ್.ಆರ್.ಟಿ.ಸಿ, ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆಯ ಮುಖಾಂತರ ಎಂ.ಆರ್.ಎಸ್ ಸರ್ಕಲ್ ಕಡೆಗೆ ಹೋಗುವುದು.

ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು ಅಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತ ಹೊರತುಪಡಿಸಿರುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ 


ಇನ್ನಷ್ಟು ಸುದ್ದಿಗಳು