ರಾಗಿಗುಡ್ಡ ಕಲ್ಲು ತೂರಾಟ ಘಟನೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಹಿಂದೂ ಸಂಘಟನೆಗಳ ಪ್ರತಿಭಟನೆ| ಪೊಲೀಸರಿಂದ ತಿಳುವಳಿಕೆ ನೋಟಿಸ್ ! ಏನಿದು

Hindu organizations staged a protest in front of the Collector's office condemning the Ragigudda stone pelting incidentರಾಗಿಗುಡ್ಡ ಕಲ್ಲು ತೂರಾಟ ಘಟನೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದವು

ರಾಗಿಗುಡ್ಡ ಕಲ್ಲು ತೂರಾಟ ಘಟನೆ ಖಂಡಿಸಿ  ಜಿಲ್ಲಾಧಿಕಾರಿ ಕಚೇರಿ ಎದುರು ಹಿಂದೂ ಸಂಘಟನೆಗಳ ಪ್ರತಿಭಟನೆ| ಪೊಲೀಸರಿಂದ ತಿಳುವಳಿಕೆ ನೋಟಿಸ್ ! ಏನಿದು



KARNATAKA NEWS/ ONLINE / Malenadu today/ Oct 11, 2023 SHIVAMOGGA NEWS



ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂಗಳ ಮನೆ ಮೇಲೆ ಕಲ್ಲೆಸೆದು ಮಾರಣಾಂತಿಕ ಹಲ್ಲೆ ನಡೆಸಿರುವ ದುಷ್ಕರ್ಮಿಗಳನ್ನು ಬಂಧಿಸಬೇಕು. ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ  ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಇವತ್ತು ಪ್ರತಿಭಟನೆ ನಡೆಸಿದರು. ಅಲ್ಲದೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

 

ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಅಖಂಡ ಭಾರತದ ಚಿತ್ರದಲ್ಲಿ ಔರಂಗಜೇಬನ, ಟಿಪ್ಪುಸುಲ್ತಾನ್ ಚಿತ್ರದ ಪರಿಕಲ್ಪನೆಯ ಟೂಲ್‌ಕಿಟ್ ಸಿದ್ಧಪಡಿಸಲಾಗಿತ್ತು. ಅಲ್ಲದೆ ಹಿಂದೂಗಳ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ಮಾರಣಾಂತಿಕ ಹಲ್ಲೆ ಮಾಡಲಾಗಿದೆ ಎಂದು ಭಜರಂಗದಳದ ಸದಸ್ಯರು ಆರೋಪಿಸಿದ್ದಾರೆ. 

 

ಈ ಘಟನೆಯಲ್ಲಿ ನಿಷೇಧಿತ ಸಂಘಟನೆ ಪಿಎಫ್‌ಐ ಕಾರ್ಯಕರ್ತರು ನೇರ ಭಾಗಿಯಾಗಿದ್ದಾರೆಂಬ ಅನುಮಾನವಿದೆ ಎಂದು ಆರೋಪಿಸಿದ ಕಾರ್ಯಕರ್ತರು ಇಂತಹ ವ್ಯಕ್ತಿಗಳನ್ನು ಗುರುತಿಸಿ ಬಂಧಿಸಬೇಕು ಎಂದು ಒತ್ತಾಯಿಸಿದ್ರು. ಅಲ್ಲದೆ   ಅಮಾಯಕ ಹಿಂದೂಗಳ ಮೇಲೆ ಹಾಕಿರುವ ಮೊಕದ್ದಮೆ ರದ್ದುಪಡಿಸಬೇಕು ಎಂದು ಆಗ್ರಹಿಸಿದ್ರು.  

 

ನೋಟಿಸ್‌ ನಡುವೆಯೂ ಪ್ರತಿಭಟನೆ |  ರಾಗಿಗುಡ್ಡದ ವಿಷಯದಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗ ದಳ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ  ನಡೆಸುವ ವಿಚಾರದಲ್ಲಿ  ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯ ವತಿಯಿಂದ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಜಿಲ್ಲಾಧ್ಯಕ್ಷ ವಾಸುದೇವ್‌ ಅವರಿಗೆ

ಪ್ರತಿಭಟನೆ ಸಭೆ ಕೈಬಿಡುವಂತೆ ಹಾಗೂ ಯಾವುದೇ ಪ್ರಚೋದನಕಾರಿ ಭಾಷಣ ಮಾಡದಂತೆ ತಿಳುವಳಿಕೆ ನೋಟಿಸ್ ಜಾರಿ ಮಾಡಲಾಗಿತ್ತು. ಅಲ್ಲದೆ. ಯಾವುದಾದರೂ ಅಹಿತಕರ ಘಟನೆ ನಡೆದರೆ ನೀವೇ ಜವಬ್ದಾರರೆಂದು, ನೋಟೀಸ್ ನಲ್ಲಿ ತಿಳಿಸಲಾಗಿತ್ತು. ಇದರ ಹೊರತಾಗಿಯು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಯನ್ನು ನಡೆಸಲಾಗಿದೆ. ಇನ್ನೂ ನಾಳೆ ಬಿಜೆಪಿಯು ಸಹ ಪ್ರತಿಭಟನೆ ಹಮ್ಮಿಕೊಂಡಿದ್ದು, ಮೂಲಗಳ ಪ್ರಕಾರ, ಅವರಿಗೂ ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ. 

 


 

ಇನ್ನಷ್ಟು ಸುದ್ದಿಗಳು 

 

  1. ಅಭಯ್ ಪ್ರಕಾಶ್ ಸಸ್ಪೆಂಡ್ ಪೊಲೀಸ್ ಇಲಾಖೆಯ ವೈಫಲ್ಯವೇ? ಹೀಗೆ ಮಾಡುವುದಾದರೆ ಹಲವರು ಅಮಾನತ್ತಲ್ಲಿರಬೇಕಿತ್ತಲ್ಲವೇ? ಯಾವ ತಪ್ಪಿಗೆ ಈ ಶಿಕ್ಷೆ? JP ಬರೆಯುತ್ತಾರೆ

  2. FACEBOOK , INSTAGRAM ಪೋಸ್ಟ್ ಹಾಕಬೇಕಾದರೆ ಹುಷಾರ್! ಬೀಳುತ್ತೆ ಕೇಸ್​! social media monitoring ಮಾಡುತ್ತಿದೆ ಶಿವಮೊಗ್ಗ ಪೊಲೀಸ್ ಇಲಾಖೆ

  3. ಈ ಹಾವು ನಿಮ್ಮ ಕಣ್ಣಿಗೆ ಬಿದ್ದಿತ್ತಾ? ಇದನ್ನ ಏನಂದು ಕರೆಯುತ್ತಾರೆ? ಈ ಹಾವಿನ ಮೈಮೇಲೆ ನೀರು ಇಂಗುತ್ತೆ ಗೊತ್ತಾ?