HOLEHONNUR KARNATAKA

ಎನ್.ಹೆಚ್ 369 ಬೈಪಾಸ್​ನಲ್ಲಿ ಗಾಂಜಾ ಮಾರುತ್ತಿದ್ದ ಐವರ ಬಂಧನ, 2 ಕಾಲು ಲಕ್ಷ ಮೌಲ್ಯದ ಮಾಲ್​ ಜಪ್ತಿ

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನ ಜಪ್ತಿ ಮಾಡಲಾಗಿದೆ.

ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

ದಿನಾಂಕ 24-04-2026 ರಂದು ನಡೆದಿದ್ದ ಘಟನೆ ಇದಾಗಿದೆ. ಹೊಳೆಹೊನ್ನೂರಿನಿಂದ ಶಿವಮೊಗ್ಗ ಕಡೆಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 369ರ ಬೈಪಾಸ್ ರಸ್ತೆಯಲ್ಲಿ ಕೆಲವರು ಗಾಂಜಾ ಮಾರುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು.

ಎನ್.ಹೆಚ್ 369 ಬೈಪಾಸ್ ರಸ್ತೆಯಲ್ಲಿ ಮಾಹಿತಿ ಆಧರಿಸಿ ರೇಡ್

ಈ ಹಿನ್ನೆಲೆಯಲ್ಲಿ ಹೊಳೆಹೊನ್ನೂರು ಪೊಲೀಸ್ ಠಾಣೆಯ ಇನ್​ಸ್ಪೆಕ್ಟರ್​ ಶಿವಪ್ರಸಾದ್ ಎಂ. ಅವರ ನೇತೃತ್ವದ ತಂಡ ದಾಳಿ ನಡೆಸಿದೆ. ದಾಳಿ ವೇಳೆ ಒಟ್ಟು ಐವರು ಆರೋಪಿಗಳು ಸಿಕ್ಕಿಬಿದ್ದಿದ್ದು ಲವ (24), ಲೇಖಕ್ (20), ಮನೋಜ್ (27), ಕಿರಣ್ (24) ಹಾಗೂ ಗಿರೀಶ್ (28) ಎಂಬುವವರನ್ನು ದಸ್ತಗಿರಿ ಮಾಡಲಾಗಿದೆ.

2,34,000 ರೂಪಾಯಿ ಮೌಲ್ಯದ ಗಾಂಜಾ ಜಪ್ತಿ

ಇನ್ನೂ ಬಂಧಿತ ಆರೋಪಿಗಳಿಂದ ಅಂದಾಜು 2,34,000 ರೂಪಾಯಿ ಮೌಲ್ಯದ 4 ಕೆಜಿ 690 ಗ್ರಾಂ ತೂಕದ ಗಾಂಜಾ ಜಪ್ತಿ ಮಾಡಲಾಗಿದೆ. ಕೃತ್ಯಕ್ಕೆ ಬಳಸಲಾಗಿದ್ದ ಹೋಂಡಾ ಆಕ್ಟಿವಾವನ್ನು ಕೂಡ ಸೀಜ್ ಮಾಡಲಾಗಿದ್ದು ಈ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ 1985 ರ ಕಲಂ 20(b)(ii)B ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ