Shivamogga | Feb 5, 2024 | ಶಿವಮೊಗ್ಗದ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್ ಲಿಮಿಟ್ಸ್ನಲ್ಲಿ ನಿನ್ನೆ ನಡೆದ ಕುರಿಗೂಟ ಕಡಿದಿದ್ದಕ್ಕೆ ಮಸೀದಿ ಬಳಿ ಕರೆದೊಯ್ದು ಹಲ್ಲೆ ಮಾಡಿದ ಪ್ರಕರಣ ಸಂಬಂಧ ಎಸ್ಪಿ ಮಿಥುನ್ ಕುಮಾರ್ ವಿಡಿಯೋ ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳ ವಾಟ್ಸ್ಯಾಪ್ ಗ್ರೂಪ್ಗೆ ವಿಡಿಯೋ ಹೇಳಿಕೆಯನ್ನು ಎಸ್ಪಿ ಮಿಥುನ್ ಕುಮಾರ್ ರವಾನಿಸಿದ್ದಾರೆ. ಜಂಬರಘಟ್ಟ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,ಕುರಿಕಟ್ಟಲು ಗೂಟಕ್ಕಾಗಿ ರವಿ ಎಂಬ ವ್ಯಕ್ತಿ ಮರ ಕಡಿಯಲು ಹೋಗಿದ್ದ ವೇಳೆ, ಅಲ್ಲಿ ವಿರೋಧ ವ್ಯಕ್ತವಾಗಿದೆ. ಈ ವೇಳೆ ಮಾತಿನ ಚಕಮಕಿ ನಡೆದಿದ್ದು, ನೂಕಾಟ ನಡೆದಿತ್ತು. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್ನಲ್ಲಿ ಕಂಪ್ಲೆಂಟ್ ಕೂಡ ದಾಖಲಾಗಿದೆ. ಪ್ರಕರಣ ಸಂಬಂಧ ಪೊಲೀಸ್ ಸ್ಟೇಷನ್ ನಲ್ಲಿ ಕೇಸ್ ದಾಖಲಾಗಿದ್ದು, ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.