ಹೊಳೆಹೊನ್ನೂರು | ಇಲ್ಲಿನ ಬೊಮ್ಮನಕಟ್ಟೆ ಪಂಡರಹಳ್ಳಿ ಕ್ಯಾಂಪ್‌ನಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ. ಕ್ಯಾಂಪಿನ ನಿವಾಸಿಯಾದ 23 ವರ್ಷದ ಚಂದನಾ ಬಾಯಿ ಮೃತ ದುರ್ದೈವಿಯಾಗಿದ್ದು, ಈಕೆಯ ಪತಿ 28 ವರ್ಷದ ಗೋಪಿ ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವಮೊಗ್ಗದ 40 ಹೆಚ್ಚಿನ ಪ್ರದೇಶದಲ್ಲಿ ಈ ದಿನ ಕರೆಂಟ್ ಇರಲ್ಲ
ಹೊಳೆಹೊನ್ನೂರು ಪೊಲೀಸ್ ಠಾಣೆ
ಆರೋಪಿ ಗೋಪಿ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದ್ದು, ಈ ವಿಚಾರವಾಗಿ ದಂಪತಿಗಳ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ತಾನು ಎರಡನೇ ಮದುವೆಯಾಗುವುದಾಗಿ ಹೇಳುತ್ತಿದ್ದ ಆರೋಪಿಯು, ಅದಕ್ಕೆ ಒಪ್ಪಿಗೆ ನೀಡುವಂತೆ ಪತ್ನಿಗೆ ನಿರಂತರವಾಗಿ ಹಿಂಸೆ ನೀಡುತ್ತಿದ್ದನಂತೆ. ಇದೇ ವಿಚಾರಕ್ಕೆ, ಪತ್ನಿಯ ಕತ್ತು ಹಿಸುಕಿ ಜೀವ ತೆಗೆದಿದ್ದಾನೆ. ಆರೋಪಿ ಈ ಹಿಂದೆ ಪೋಕ್ಸೋ ಪ್ರಕರಣವೊಂದರಲ್ಲಿ ಭಾಗಿಯಾಗಿ ಜೈಲು ಶಿಕ್ಷೆ ಅನುಭವಿಸಿ ಬಂದಿದ್ದ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಹೊಳೆಹೊನ್ನೂರು ಪೊಲೀಸರು ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಒಲಿಯಲಿದೆ ಆಕಸ್ಮಿಕ ಧನಯೋಗ! ಇವತ್ತಿನ ದಿನಭವಿಷ್ಯ ! ವಿಶೇಷ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.