ಶಿವಮೊಗ್ಗ ಜಿಲ್ಲೆಯ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ಇವತ್ತು ರಜೆ |ಡಿಸಿ ಆದೇಶ
Hurricane Fengel effect,holiday has been declared for all schools, anganwadis, primary, high schools , pre-university colleges , Shivamogga district
SHIVAMOGGA | MALENADUTODAY NEWS | ಮಲೆನಾಡು ಟುಡೆ Dec 3, 2024
ಫೆಂಗಲ್ ಚಂಡಮಾರುತದ ಅಬ್ಬರ ಮಲೆನಾಡಿನ ಮೇಲೂ ಜೋರಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಈ ಸಂಬಂಧ ಡಿಸಿ ಕಚೇರಿಯಿಂದ ಪ್ರಕಟಣೆಯನ್ನ ಬಿಡುಗಡೆ ಮಾಡಲಾಗಿದೆ. ಇನ್ನೆರಡು ದಿನ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಪಿಯು ಕಾಲೇಜುಗಳಿಗೆ ಇವತ್ತು ರಜೆ (Holiday) ಘೋಷಿಸಿದ್ದಾರೆ.
ಪ್ರಕಟಣೆಯಲ್ಲಿ ಏನಿದೆ?
ಶಿವಮೊಗ್ಗ ಜಿಲ್ಲೆಯಲ್ಲಿ ಡಿ.3 ಮತ್ತು 4ರಂದು ಆರೆಂಜ್ ಮತ್ತು ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತ ಕ್ರಮ ಕೈಗೊಂಡಿದ್ದು, ಡಿ.3ರಂದು ಶಿವಮೊಗ್ಗ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ
SUMMARY | Hurricane Fengel effect A holiday has been declared for all schools, anganwadis, primary, high schools and pre-university colleges in Shivamogga district on December 3
KEY WORDS | Hurricane Fengel effect,holiday has been declared for all schools, anganwadis, primary, high schools , pre-university colleges , Shivamogga district