RAIN NEWS LIVE

ತೀರ್ಥಹಳ್ಳಿ, ಸಾಗರ, ಹೊಸನಗರ ಬಳಿಕ ಭದ್ರಾವತಿಯಲ್ಲಿಯು ಇವತ್ತು ರಜೆ! ವಿವರ ಓದಿ

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Holiday Declared / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಜಿಲ್ಲೆಯಾದ್ಯಂತ ಮಳೆ ಅಬ್ಬರ ಜೋರಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲೆಯ 4 ತಾಲೂಕುಗಳ ವ್ಯಾಪ್ತಿಯಲ್ಲಿ ರಜೆ ಘೋಷಿಸಿ ಆಯಾ ತಾಲೂಕಿನ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಹೊಸನಗರ, ತೀರ್ಥಹಳ್ಳಿ, ಸಾಗರ ಹಾಗೂ ಭದ್ರಾವತಿ ತಾಲೂಕುಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು. ಇದೀಗ ಭದ್ರಾವತಿ ತಾಲೂಕಿನಲ್ಲಿಯೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಭದ್ರಾವತಿ ತಾಲೂಕಿನಲ್ಲಿ ಮಳೆಯ ಆರ್ಭಟ ಜೋರಾಗಿರುವ ಕಾರಣ ಭದ್ರಾವತಿ ತಹಶೀಲ್ದಾರ್ ಪ್ರದೀಪ್ ತಾಲೂಕಿನಾದ್ಯಂತ ಬರುವ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಇದೇ ರೀತಿಯಾಗಿ ಹೊಸನಗರ ತಾಲೂಕಿನ ತಹಶೀಲ್ದಾರ್ ಭರತ್ ರಾಜ್ ಹಾಗೂ ತೀರ್ಥಹಳ್ಳಿ ತಾಲೂಕಿನ ತಹಶೀಲ್ದಾರ್ ರಂಜಿತ್ ಅವರು ಸಹ ತಮ್ಮ ತಮ್ಮ ತಾಲೂಕಿನ ವ್ಯಾಪ್ತಿಯಲ್ಲಿರುವ ಅಂಗನವಾಡಿ, ಶಾಲಾ ಹಾಗೂ ಪಿಯು ಕಾಲೇಜುಗಳಿಗೆ ರಜೆ ನೀಡಿ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

ಸಾಗರ ತಾಲೂಕು ತಹಶೀಲ್ದಾರ್ ಡಾ. ಪ್ರತಿಭಾ ಆದೇಶದ ಅನ್ವಯ ತಾಲೂಕಿನಲ್ಲಿ ಕೇವಲ ಅಂಗನವಾಡಿ ಕೇಂದ್ರಗಳು ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯ್​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ