ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ವಿಚಾರ!? ಶಿಕ್ಷಣ ಇಲಾಖೆ ಹೊರಡಿಸಿರುವ ಸೂಚನೆ ಇಲ್ಲಿದೆ

Holiday for primary and secondary schools!? Here is the instruction issued by the Education Department ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ವಿಚಾರ!? ಶಿಕ್ಷಣ ಇಲಾಖೆ ಹೊರಡಿಸಿರುವ ಸೂಚನೆ ಇಲ್ಲಿದೆ

ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ವಿಚಾರ!?  ಶಿಕ್ಷಣ ಇಲಾಖೆ ಹೊರಡಿಸಿರುವ ಸೂಚನೆ ಇಲ್ಲಿದೆ

 KARNATAKA NEWS/ ONLINE / Malenadu today/ Jul 25, 2023 SHIVAMOGGA NEWS  

ಶಿವಮೊಗ್ಗ ಜಿಲ್ಲೆಯಲ್ಲಿ ನಿನ್ನೆ ವಿಪರೀತ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿತ್ತು. ಇವತ್ತು ಸಹ ರಜೆ ನೀಡುವ ಬಗ್ಗೆ ಉಪನಿರ್ದೆಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಶಿವಮೊಗ್ಗ ಜಿಲ್ಲೆಯಿಂದ ಪ್ರಕಟಣೆಯೊಂದನ್ನ ಹೊರಡಿಸಲಾಗಿದೆ. ಪ್ರಕಟಣೆಯಲ್ಲಿ ಶಾಲೆಗಳಿಗೆ ರಜೆ ನೀಡುವ ವಿಚಾರವನ್ನು ಆಯಾ ಶಾಲೆಯ ಎಸ್​ಡಿಎಂಸಿಯ ತೀರ್ಮಾನಕ್ಕೆ ಬಿಡಲಾಗಿದೆ. ಈ ಆದೇಶ ಹೊಸನಗರ , ತೀರ್ಥಹಳ್ಳಿ ಹಾಗೂ ಸಾಗರ ತಾಲ್ಲೂಕಿಗೆ ಮಾತ್ರ ಅನ್ವಯವಾಗಲಿದೆ. 

 

ಜಿಲ್ಲಾಧಿಕಾರಿಗಳು  ಉಲ್ಲೇಖಿಸಿದಂತೆ ಪ್ರಕಟಣೆಯನ್ನಹೊರಡಿಸಲಾಗಿದ್ದು, ಪ್ರಕಟಣೆಯ ವಿವರ ಹೀಗಿದೆ.  

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲ್ಲೂಕು ವ್ಯಾಪ್ತಿಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು, ಶಿವಮೊಗ್ಗ ಜಿಲ್ಲೆ. ರವರ ಸೂಚನೆಯನ್ವಯ ಮೇಲ್ಕಂಡ ಮೂರು ತಾಲ್ಲೂಕುಗಳ ಶಾಲಾ ಎಸ್‌.ಡಿ.ಎಂ.ಸಿ.ಯವರು ಮಳೆಯ ತೀವ್ರತೆಗೆ ಅನುಸಾರವಾಗಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಠಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಚರ್ಚಿಸಿ ದಿನಾಂಕ:25/07/2023 ರಂದು ಅಗತ್ಯವಿರುವ ಪ್ರಾಥಮಿಕ / ಪ್ರೌಢ ಶಾಲೆಗಳಿಗೆ ಮಾತ್ರ ಅನ್ವಯವಾಗುವಂತೆ ರಜೆ ಘೋಷಿಸಲು ಕ್ರಮವಹಿಸುವಂತೆ ಹಾಗೂ ಸದರಿ ರಜೆಯನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ ಮಾಡಿಕೊಳ್ಳುವಂತೆ ಶಾಲಾ ಮುಖ್ಯ ಶಿಕ್ಷಕರಿಗೆ ಅಗತ್ಯ ಸೂಚನೆ ನೀಡಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದೆ.

 

ಭದ್ರಾವತಿ ಮರ್ಡರ್ ಕೇಸ್! ರೌಡಿ ಮುಜ್ಜು ಹತ್ಯೆ ಪ್ರಕರಣದ ರಹಸ್ಯ ಭೇದಿಸಿದ ಶಿವಮೊಗ್ಗ ಪೊಲೀಸ್ ! ನಡೆದಿದ್ದೇನು? 

ನಡುರಸ್ತೆಯಲ್ಲಿ ಮಹಿಳೆಯ ಕೊಲೆ! ಸಾಬೀತಾಯ್ತು ಅಪರಾಧ! ಶಿಕಾರಿಪುರ ಗ್ರಾಮಾಂತರ ಠಾಣೆಯ ಕೇಸ್​ನಲ್ಲಿ ಕೋರ್ಟ್ ತೀರ್ಪು!

 

ಮಾಜಿ ಸಿಎಂ ಬಿಎಸ್​ವೈ ಇನ್ಮುಂದೆ ಡಾ.ಬಿಎಸ್​ ಯಡಿಯೂರಪ್ಪ! ಅಭಿಮಾನಿಗಳಿಗೂ ಅವಕಾಶ ನೀಡಿದ BYR

 

ಮಗ ಬೈಕ್​ ಓಡಿಸಿದ ತಪ್ಪಿಗೆ 25 ಸಾವಿರ ರೂಪಾಯಿ ದಂಡ ಕಟ್ಟಿದ ತಂದೆ! ಕಾರಣವೇನು ಗೊತ್ತಾ?

 

ವೈದ್ಯರೊಬ್ಬರ ಸಮಯ ಪ್ರಜ್ಞೆಯಿಂದ ಬಯಲಾಯ್ತು ದುಷ್ಕೃತ್ಯ! ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾಯ್ತು ಮತ್ತೊಂದು ಪೋಕ್ಶೋ ಕೇಸ್!

 

 ​