Holliday tomorrow :,ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ ಜುಲೈ (26) ರಜೆ ಘೋಷಣೆ
ಜಿಲ್ಲೆಯಲ್ಲಿ ವ್ಯಾಪಕ ಮಳೆ ಮತ್ತು ಶೀತ ವಾತಾವರಣದ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜುಲೈ 26, 2025ರ ಶನಿವಾರದಂದು ಶಿವಮೊಗ್ಗ ಜಿಲ್ಲೆಯಲ್ಲಿ ಬರುವ ಕೆಲ ತಾಲೂಕಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಳಿದೆಡೆ ಕಾಲೇಜುಗಳಿಗೆ ರಜೆ ಘೋಷಿಸಿಲ್ಲ.
ಭದ್ರಾವತಿ, ಶಿಕಾರಿಪುರ ,ತೀರ್ಥಹಳ್ಳಿ ಸಾಗರ, ಹೊಸನಗರ, ಸೊರಬ ಹಾಗೂ ಶಿವಮೊಗ್ಗ ತಾಲೂಕು ಗಳ ಅಂಗನವಾಡಿ ಶಾಲ ಕಾಲೇಜು ಗಳಿಗೆ ರಜೆ ಘೋಷಿಸಲಾಗಿದೆ.
ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳು ಈ ಆದೇಶ ಹೊರಡಿಸಿದ್ದು, ರಜೆಯ ಅವಧಿಯಲ್ಲಿ ನಷ್ಟವಾಗುವ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜಾ ದಿನಗಳಲ್ಲಿ ಸರಿದೂಗಿಸಲು ಸಂಬಂಧಪಟ್ಟ ಶಾಲಾ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ.


