ಶಿವಮೊಗ್ಗಕ್ಕೆ ಬಂದ ಡಾ.ಜಿ.ಪರಮೇಶ್ವರ್ | ಚಂದ್ರಶೇಖರನ್ ಕುಟುಂಬಕ್ಕೆ ಸಾಂತ್ವನ
Home Minister Dr. G Parameshwara visited Shivamogga in connection with the suicide case of the superintendent of Valmiki Development Corporation

SHIVAMOGGA | MALENADUTODAY NEWS | May 30, 2024 ಮಲೆನಾಡು ಟುಡೆ
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಪ್ರಕರಣ ಸಂಬಂಧ ಶಿವಮೊಗ್ಗಕ್ಕೆ ಗೃಹಸಚಿವ ಡಾ.ಜಿ ಪರಮೇಶ್ವರ್ ಭೇಟಿಕೊಟ್ಟಿದ್ದಾರೆ. ಮೃತ ನೌಕರ ಚಂದ್ರಶೇಖರ್ ಮನೆಗೆ ಬಂದ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯಾಗಿದ್ದ ಚಂದ್ರಶೇಖರನ್ ಪಿ, ಅಕ್ರಮ ಹಣ ವರ್ಗಾವಣೆಯ ಬಗ್ಗೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಗೃಹಸಚಿವರ ಈ ಭೇಟಿ ಕುತೂಹಲ ಮೂಡಿಸಿದೆ.
ಇನ್ನೂ ಶಿವಮೊಗ್ಗ ನಗರದ ವಿನೋಬನಗರದ ಕೆಂಚಪ್ಪ ಬಡಾವಣೆಯಲ್ಲಿರುವ ಚಂದ್ರಶೇಖರನ್‌ರವರ ಮನೆಗೆ ವಿಸಿಟ್ ಮಾಡಿ ಪತ್ನಿ ಕವಿತಾ ಹಾಗೂ ಮಕ್ಕಳಿಗೆ ಸಾಂತ್ವನ ಹೇಳಿದ ಗೃಹ ಸಚಿವರು ನಿಮ್ಮ ಜೊತೆ ಸರ್ಕಾರ ಇದೆ ಎಂದು ಭರವಸೆ ನೀಡಿದರು. ಈ ವೇಳೆ ಗೃಹಸಚಿವರ ಬಳಿ ತಮ್ಮ ಅಳಲು ತೋಡಿಕೊಂಡ ಕುಟುಂಬಸ್ಥರು ಮೃತರ ಸಾವಿಗೆ ನ್ಯಾಯ ಕೊಡಿಸಬೇಕು ಎಂದು ವಿನಂತಿ ಮಾಡಿಕೊಂಡರು
Home Minister Dr. G Parameshwara visited Shivamogga in connection with the suicide case of the superintendent of Valmiki Development Corporation. He visited the house of the deceased employee Chandrashekhar and offered condolences to the family.