Honnavar ಹೊನ್ನಾವರ/ ಶಿವಮೊಗ್ಗ : malenadutoday news ತಾಲೂಕಿನಲ್ಲಿ ನಡೆದ ಕಬ್ಬಿಣದ ಸೆಂಟ್ರಿಂಗ್ (iron centering) ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶಿವಮೊಗ್ಗದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನವರಾದ ತನ್ವೀರ್, ಇಸಾಕ್, ಷಹಾದ್, ಮನ್ಸೂರ್, ಕಲೀಮುಲ್ಲಾ, ಎಂದು ಗುರುತಿಸಲಾಗಿದೆ.

ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಅವರಿಂದ ಕಳವು ಮಾಡಿದ ₹2 ಲಕ್ಷ ಮೌಲ್ಯದ ಕಬ್ಬಿಣದ ಸೆಂಟ್ರಿಂಗ್ ಹಾಗೂ ಕಳ್ಳತನಕ್ಕೆ ಬಳಸಿದ್ದ ₹5 ಲಕ್ಷ ಮೌಲ್ಯದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಘಟನೆ ಸಂಬಂಧ ಕಳೆದ ಜುಲೈ 15 ರಂದು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರ ಮಾರ್ಗದರ್ಶನದಲ್ಲಿ ಪಿ.ಎಸ್.ಐ. ರಾಜಶೇಖರ ವಂದಲಿ ನೇತೃತ್ವದ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ.
