SHIVAMOGGA NEWS TODAY

ಶಿವಮೊಗ್ಗ: ಬಾವಿ ಮೋಟಾರ್ ಆನ್ ಮಾಡಲು ಹೋಗಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಹೊಸನಗರ: ತಾಲೂಕಿನ ರಿಪ್ಪನಪೇಟೆ ಸಮೀಪದ ಹರತಾಳು ಗ್ರಾಮದ ದೊಣಂದೂರಿನಲ್ಲಿ ಬಾವಿ ಮೋಟಾರ್ ಕನೆಕ್ಷನ್ ನೀಡುವಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ದೊಣಂದೂರು ನಿವಾಸಿ ಕೃಷ್ಣಪ್ಪ (59) ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಅಡ್ಡಮತದಾನ! ಶಿವಮೊಗ್ಗದ ಇಬ್ಬರು ಶಾಸಕರಿಂದಲೇ ಕಾಂಗ್ರೆಸ್​ಗೆ ವೋಟ್ : ಆರ್​ಎಂ ಮಂಜುನಾಥ ಗೌಡ 

ಮೃತ ಕೃಷ್ಣಪ್ಪ ಅವರು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಕಳೆದ ಸುಮಾರು 3 ವರ್ಷಗಳಿಂದ ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚೇತರಿಸಿಕೊಳ್ಳುತ್ತಿದ್ದರು. ಇತ್ತೀಚೆಗೆ ಅವರ ಮನೆ ಹಿಂಭಾಗದಲ್ಲಿ ಹೊಸದಾಗಿ ಬಾವಿ ತೋಡುವ ಕಾಮಗಾರಿ ನಡೆಯುತ್ತಿತ್ತು. ಬಾವಿಯಲ್ಲಿ ಸಂಗ್ರಹವಾಗಿದ್ದ ನೀರನ್ನು ಹೊರತೆಗೆದು ಖಾಲಿ ಮಾಡುವ ಸಲುವಾಗಿ ಮೋಟಾರ್ ಆನ್ ಮಾಡಲು ಕೃಷ್ಣಪ್ಪ ಮುಂದಾಗಿದ್ದರು. 

ಮೋಟಾರ್‌ನ ವಿದ್ಯುತ್ ವೈರ್ ಅನ್ನು ಅಡುಗೆ ಮನೆಯಲ್ಲಿದ್ದ ಸ್ವಿಚ್ ಬೋರ್ಡ್‌ಗೆ ಸಂಪರ್ಕಿಸಲು ಹೋದಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದೆ. ಕರೆಂಟ್ ಶಾಕ್ ಹೊಡೆದ ತೀವ್ರತೆಗೆ ಕೃಷ್ಣಪ್ಪ ಅವರ ಬಲಗೈಗೆ ಗಂಭೀರ ಗಾಯಗಳಾಗಿದ್ದು, ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಕುಟುಂಬಸ್ಥರು ಹಾಗೂ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಕೊಂಡೊಯ್ದರಾದರೂ, ಪರೀಕ್ಷಿಸಿದ ವೈದ್ಯರು ಅವರು ಈಗಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಈ ಕುರಿತು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Hosanagar Man Electrocuted to Death in Ripponpet

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY