Shivamogga | ಹೊಸನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ ನಿನ್ನೆ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು ಇಡಿ ಬಸ್ ಸುಟ್ಟು ಹೋಗಿದೆ.
ಶಿವಮೊಗ್ಗ ಮತ್ತು ಹೊಸನಗರ ಗಡಿಭಾಗದಲ್ಲಿ ಸಿಗುವ ಅರಸಾಳು ಹಾಗೂ ಸೂಡೂರು ಮಧ್ಯೆ ನಿನ್ನೆ ಮಧ್ಯರಾತ್ರಿ ಸುಮಾರಿಗೆ ಘಟನೆ ಸಂಭವಿಸಿದೆ.
ಸುಳ್ಳು ಹೇಳಿ 2 ನೇ ಮದುವೆಯಾದ ತೀರ್ಥಹಳ್ಳಿಯ ವ್ಯಕ್ತಿಗೆ ಶಿವಮೊಗ್ಗ ಕೋರ್ಟ್ ಕೊಟ್ಟ ಶಿಕ್ಷೆಯೇನು ಗೊತ್ತಾ..?
ಅದೃಷ್ಟವಶಾತ್ ಘಟನೆಯಲ್ಲಿ ಹೆಚ್ಚು ಅಪಾಯವಾಗಿಲ್ಲ. ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ಘಟನೆ ವೇಳೆ ಶ್ರೀ ಅನ್ನಪೂರ್ಣೇಶ್ವರಿ ಹೆಸರಿನ ಈ ಖಾಸಗಿ ಬಸ್‌ನಲ್ಲಿ ಚಾಲಕ ಹಾಗೂ ನಿರ್ವಾಹಕ ಸೇರಿದಂತೆ ಸುಮಾರು 40 ಮಂದಿ ಪ್ರಯಾಣಿಕರಿದ್ದರು

ನಡೆದ ಘಟನೆ
ಪ್ರಯಾಣದ ವೇಳೆ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ತಕ್ಷಣವೇ ಗಮನಿಸಿದ ಚಾಲಕ, ರಸ್ತೆ ಬದಿಯಲ್ಲಿದ್ದ ಮರವೊಂದಕ್ಕೆ ಬಸ್ಸನ್ನು ಡಿಕ್ಕಿ ಹೊಡೆಸಿದ್ದಾರೆ. ಬಸ್ ಡಿಕ್ಕಿಯಾದ ಬೆನ್ನಲ್ಲೆ ಪ್ರಯಾಣಿಕರು ಎಕ್ಸಿಟ್ ಡೋರ್ ಹಾಗೂ ಕಿಟಕಿಗಳ ಮೂಲಕ ಹೊರಜಿಗಿದು ಬಂದಿದ್ದಾರೆ. ಬಳಿಕ ಬಸ್ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟುಹೋಗಿದೆ. ಇನ್ನೂ ಘಟನೆ ಬಗ್ಗೆ ಬಸ್ನಲ್ಲಿದ್ದವರು, ಬಸ್ ಚಲಿಸುತ್ತಿದ್ದಾಗಲೇ ಸುಟ್ಟ ವಾಸನೆ ಬರುತ್ತಿತ್ತು, ಇದನ್ನು ಗಮನಿಸುವಷ್ಟರಲ್ಲಿಯೇ ಕೆಲವರು ಚೀರಾಡುವ ಶಬ್ದ ಕೇಳಿಸಿತು, ಕೂಡಲೇ ನಾವೆಲ್ಲರೂ ತುರ್ತು ನಿರ್ಗಮನ ದ್ವಾರದ ಮೂಲಕ ಹೊರಬಂದೆವು ಎಂದು ತಿಳಿಸಿದ್ದಾರೆ.
ಘಟನೆಯಲ್ಲಿ ಒಟ್ಟು 30 ಪ್ರಯಾಣಿಕರಿಗೆ ಗಾಯಗಳಾಗಿವೆ. ಈ ಪೈಕಿ ಗಂಭೀರವಾಗಿ ಗಾಯಗೊಂಡವರನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ತಡರಾತ್ರಿಯೇ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು, ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯದಲ್ಲಿ ನೆರವಾದರು. ಘಟನೆಯು ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಸಂಬಂಧ ಹೆಚ್ಚಿನ ತನಿಖೆ ಇನ್ನಷ್ಟೆ ಆರಂಭವಾಗಬೇಕಿದೆ.
ಶಿವಮೊಗ್ಗ ಬೆಳ್ಳಿ ಬಂಗಾರ ಬಲು ಭಾರ! ಮತ್ತೆ ಏರಿದ ಬೆಲೆ! ಎಷ್ಟಿದೆ ನೋಡಿ ಚಿನ್ನ ಬೆಳ್ಳಿ ರೇಟು!
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.








