hosanagara accident ಜೂನ್​ 27 ಹೊಸನಗರ ಬಳಿ ಕಾರು-ಕ್ಯಾಂಟರ್ ಡಿಕ್ಕಿ | ಕ್ಯಾಂಟರ್ ಚಾಲಕನಿಗೆ ಗಂಭೀರ ಗಾಯ

prathapa thirthahalli
Prathapa thirthahalli - content producer

hosanagara accident : ಹೊಸನಗರ ಬಳಿ ಕಾರು-ಕ್ಯಾಂಟರ್ ಡಿಕ್ಕಿ | ಕ್ಯಾಂಟರ್ ಚಾಲಕನಿಗೆ ಗಂಭೀರ ಗಾಯ

ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕ್ಯಾಂಟರ್​ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಹೋಬಳಿಯ ನರ್ತಿಗೆ ಗ್ರಾಮದ ಬಳಿ ನಡೆದಿದೆ.

ಶಿವಮೊಗ್ಗದಿಂದ ತೆರಳುತ್ತಿದ್ದ ಕ್ಯಾಂಟರ್​ ಹಾಗೂ ಹುಲಿಕಲ್​ ಕಡೆಯಿಂದ ತೆರಳುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಇದರಿಂದ ಎರಡು ವಾಹನಗಳ ಮುಂಬಾಗ ಹಾನಿಗೊಳಗಾಗಿದ್ದು, ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

- Advertisement -
Share This Article