ದೋಸ್ತ್ ವಾಹನ ಅಪಘಾತ, ಚಾಲಕ ಸ್ಥಳದಲ್ಲೇ ಸಾವು

prathapa thirthahalli
Prathapa thirthahalli - content producer

Hosanagara accident  ದೋಸ್ತ್ ವಾಹನ ಅಪಘಾತ, ಚಾಲಕ ಸ್ಥಳದಲ್ಲೇ ಸಾವು

ಹೊಸನಗರ: ಹೊಸನಗರ ತಾಲೂಕಿನ ಹುಲಿಕಲ್ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಬಡಾ ದೋಸ್ತ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹೊಸನಗರದಿಂದ ಕುಂದಾಪುರದತ್ತ ಹೊರಟಿದ್ದ ವಾಹನ ಇದಾಗಿದೆ. ಮೃತ ಚಾಲಕನನ್ನು ಸಾಲಿಗ್ರಾಮದ ಗೋಪಾಲ್ ಎಂದು ಗುರುತಿಸಲಾಗಿದೆ. ವಾಹನದಲ್ಲಿದ್ದ ಕ್ಲೀನರ್ ಪ್ರಭಾಕರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಾಸ್ತಿಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -
Share This Article