ಸುದ್ದಿಯ ಸ್ಥಳ: Hosanagara, Shivamogga, Karnataka
ಮಲೆನಾಡು ಟುಡೆ ಸುದ್ದಿ / ಹೊಸನಗರ / ರೆಸ್ಟೋರೆಂಟ್‌ನಲ್ಲಿ ಊಟ ಮಾಡಿದ ಬಳಿಕ ಸಿಗರೇಟ್ ವಿಚಾರಕ್ಕೆ ಶುರುವಾದ ಮಾತುಕತೆ ಮಚ್ಚು ತೋರಿಸಿ ಬೆದರಿಕೆ ಹಾಕುವ ಹಂತಕ್ಕೆ ತಲುಪಿದ ಘಟನೆ ಹೊಸನಗರ ತಾಲೂಕಿನ ಬಿದನೂರು ನಗರ ಸಮೀಪ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹೊಸನಗರ ತಾಲೂಕಿನ ಬಿದನೂರು ನಗರ ಸಮೀಪದ ನೂಲಿಗೇರಿ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ರೆಸ್ಟೋರೆಂಟ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿರುವ ಸಂಬಂಧ ಮಾಲೀಕ ಆದಿರಾಜ್ ಅವರು ಪೊಲೀಸರಿಗೆ ದೂರು ನೀಡಿದ್ದರು.
ಮಂಗಳವಾರ ರಾತ್ರಿ ರೆಸ್ಟೋರೆಂಟ್‌ಗೆ ಬಂದಿದ್ದ ಆರೋಪಿಗಳು ಊಟ ಮಾಡಿದ ಬಳಿಕ ಸಿಗರೇಟ್ ನೀಡುವಂತೆ ಕೇಳಿದ್ದರು. ಈ ಸಂದರ್ಭದಲ್ಲಿ ರೆಸ್ಟೋರೆಂಟ್ ಮಾಲೀಕರು ಹಾಗೂ ಆರೋಪಿಗಳ ನಡುವೆ ಮಾತಿಗೆ ಮಾತು ಬೆಳೆದು ವಾಗ್ವಾದ ನಡೆದಿದೆ.
ವಾಗ್ವಾದ ನಡೆಯುತ್ತಿದ್ದ ವೇಳೆ ಆರೋಪಿಗಳಲ್ಲಿ ಒಬ್ಬಾತ ರೆಸ್ಟೋರೆಂಟ್‌ನಿಂದ ಹೊರಗೆ ತೆರಳಿ ಮಚ್ಚು ತಂದು ಮಾಲೀಕ ಆದಿರಾಜ್ ಅವರಿಗೆ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ರೆಸ್ಟೋರೆಂಟ್ ಮಾಲೀಕ ಆದಿರಾಜ್ ನೀಡಿದ ದೂರಿನ ಮೇರೆಗೆ ನಗರ ಠಾಣೆಯ ಪಿಎಸ್‌ಐ ಶಿವಾನಂದ ಕೋಳಿ ಅವರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.ಬಂಧಿತ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
