Hosanagara : ಚಲಿಸುತ್ತಿದ್ದ ಬಸ್ನಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ : ಮುಂದೇನಾಯ್ತು?
ಹೊಸನಗರದ ಕೊಡೂರು ಬಳಿ ಚಲಿಸುತ್ತಿದ್ದ ಖಾಸಗಿ ಬಸ್ ಒಂದರಲ್ಲಿ ಆಕಸ್ಮಿವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್ನಲ್ಲಿದ್ದ ಪ್ರಯಾಣಿಕರು ಆತಂಕಕ್ಕೆ ಒಳಗಾದ ಘಟನೆ ವರದಿಯಾಗಿದೆ.
ಹೊಸನಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನರಿತ ಚಾಲಕ ಕೂಡಲೇ ಬಸ್ನ್ನು ನಿಲ್ಲಿಸಿದ್ದಾರೆ. ನಂತರ ಬಸ್ನಲ್ಲಿರುವ ಪ್ರಯಾಣಿಕರನ್ನು ಬೇರೊಂದು ಬಸ್ನಲ್ಲಿ ಕಳುಹಿಸಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾದ ದೊಡ್ಡದೊಂದು ಅವಘಡ ತಪ್ಪಿದಂತಾಗಿದೆ.
