hosanagara : ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಲಾರಿ
ಹೊಸನಗರ : ಚಾಲಕ ನಿದ್ರೆ ಮಂಪರಿನಲ್ಲಿದ್ದಾಗ ಜೋಳ ತುಂಬಿದ ಟೆನ್ ವೀಲ್ ಲಾರಿಯೊಂದು ವರಾಹಿ ಹಿನ್ನೀರಿಗೆ ಬಿದ್ದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ತಿರ್ಥಹಳ್ಳಿಯಿಂದ ಕುಂದಾಪುರಕ್ಕೆ ಜೋಳ ತುಂಬಿಕೊಂಡು ಹೊರಟಿದ್ದ ಲಾರಿ ಹುಲಿಕಲ್ ಘಾಟಿಬಳಿ ಚಾಲಕನ ನಿಯಂತ್ರಣ ತಪ್ಪಿ ವರಾಹಿ ನದಿಗೆ ಬಿದ್ದಿದೆ. ಇದರ ಪರಿಣಾಮ ಲಾರಿ ನದಿಯಲ್ಲಿ ಸಂಪೂರ್ಣವಾಗಿ ಮುಳುಗಿದ್ದು, ಚಾಲಕ ಇಬ್ರಾಹಿಂ ಎಂಬುವವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಪ್ರಕರಣ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.