ಶಿವಮೊಗ್ಗ: ಚಿಕಿತ್ಸೆ ಫಲಿಸದೆ ಕೇಂದ್ರ ಕಾರಾಗೃಹದ ಸಜಾ ಬಂಧಿ ಸಾವು

This Article Written by / Prathapa thirthahalli / ಜನವರಿ 14, 2026

Hospitalized Inmate Dies in Shivamogga

ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಶಿವಮೊಗ್ಗ ಕೇಂದ್ರ ಕಾರಾಗೃಹದ ಹಿರಿಯ ಸಜಾ ಬಂಧಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರನ್ನು ಬಸವ (78) ಎಂದು ಗುರುತಿಸಲಾಗಿದೆ. 

Hospitalized Inmate Dies in Shivamogga
Hospitalized Inmate Dies in Shivamogga

ಶಿವಮೊಗ್ಗ ಡಿ,ಸಿ ಹೆಸರಿಂದ ನಿಮ್ಗೆ ಮೆಸೇಜ್‌ ಬರ್ತಿದಿಯಾ, ಹಾಗಾದ್ರೆ ಈ ಸುದ್ದಿ ಓದಿ

ಮೃತ ಬಸವ ಅವರು 2018ರಲ್ಲಿ ಉಡುಪಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ದಾಖಲಾದ ಪ್ರಕರಣವೊಂದರಲ್ಲಿ 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಶಿಕ್ಷೆಯ ಆರಂಭದಲ್ಲಿ ಉಡುಪಿ ಕಾರಾಗೃಹದಲ್ಲಿದ್ದ ಇವರನ್ನು, 2019ರಲ್ಲಿ ಶಿವಮೊಗ್ಗ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು. 

ವಯೋಸಹಜ ಕಾಯಿಲೆಗಳ ಜೊತೆಗೆ ಮಧುಮೇಹ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದ ಇವರಿಗೆ ಕಾರಾಗೃಹದ ವೈದ್ಯಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ ನಿರಂತರ ಚಿಕಿತ್ಸೆ ನೀಡಲಾಗುತ್ತಿತ್ತು. ಹಲವು ಬಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆರೋಗ್ಯದ ಸ್ಥಿತಿ ಗಂಭೀರಗೊಂಡಾಗ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೂ ಕಳುಹಿಸಿಕೊಡಲಾಗಿತ್ತು. 

ಆದರೆ, ಕಳೆದ ಎರಡು ದಿನಗಳ ಹಿಂದೆ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟ ಹಿನ್ನೆಲೆಯಲ್ಲಿ ಜನವರಿ 12ರ ರಾತ್ರಿ 10:20ಕ್ಕೆ ತುರ್ತಾಗಿ ಶಿವಮೊಗ್ಗದ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿತ್ತಾದರೂ, ಇಂದು (ಜ. 14) ಮುಂಜಾನೆ 3:12ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದಾಗಿ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

Hospitalized Inmate Dies in Shivamogga

 

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Malenadu Today.,mcgann hospital,shivamogga news

ಮುಂದಿನ ಸುದ್ದಿ ಒದಿ