ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 13 2025: ಶಿವಮೊಗ್ಗದ ದುರ್ಗಿಗುಡಿಯಲ್ಲಿ ನಿನ್ನೆದಿನ ಯುವಕನೊಬ್ಬ ಬಿಲ್ಡಿಂಗ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಲ್ಲಿನ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲವಾದರೂ, ಬೆಟ್ಟಿಂಗ್ ವಿಚಾರದಲ್ಲಿ ಸ್ಥಳೀಯರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಯುವಕ ಮೂರು ಅಂತಸ್ತಿನ ಕಟ್ಟಡದ ಮೇಲಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನ. ದುರ್ಗಿಗುಡಿ ರಸ್ತೆಯಲ್ಲಿರುವ ಶನಿ ಮಹಾತ್ಮ ದೇವಸ್ಥಾನದ ಹಿಂಭಾಗದಲ್ಲಿ ಘಟನೆ ಸಂಭವಿಸಿದೆ.

27 ವರ್ಷದ ಅಮಿತ್ ಮೃತ ಯುವಕ, ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಈತ ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ಬಜಗೋಳಿಯವನು. ಇನ್ನೂ ಯುವಕ ಕಟ್ಟಡದಿಂದ ಬೀಳುತ್ತಲೇ ಆತನನ್ನು ಸ್ಥಳೀಯರು ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಅಷ್ಟರಲ್ಲಿ ಆತನ ಕೊನೆಯುಸಿರು ಎಳೆದಿದ್ದ. ಈ ವಿಚಾರದಲ್ಲಿ ಜಯನಗರ ಪೊಲೀಸ್ ಠಾಣೆಯ ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ.
Hotel Employee Jumps to Death from Under-Construction Building in Shimoga
Shimoga Suicide News, Durgigudi Road Incident, Hotel Employee Death, Karkala youth suicide, Jayanagar Police Investigation, Mental health support India, Shimoga Jayanagar Police Station, Malenadu Today News, Meggan Hospital Shimoga, ಶಿವಮೊಗ್ಗ ಆತ್ಮಹತ್ಯೆ, ಹೋಟೆಲ್ ಉದ್ಯೋಗಿ ಸಾವು, ದುರ್ಗಿಗುಡಿ ಘಟನೆ, ಕಾರ್ಕಳ ಯುವಕ, ಅಮಿತ್, ಜಯನಗರ ಪೊಲೀಸ್, ತನಿಖೆ.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!