ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಜನವರಿ 12 ಕ್ಕೆ ಯುವನಿಧಿ ಯೋಜನೆ ಉದ್ಧಾಟನೆ ಬಗ್ಗೆ ಹೆಚ್​.ಎಸ್​.ಸುಂದರೇಶ್ ಹೇಳಿಕೆ!

ಹಂಚಿಕೊಳ್ಳಿ
WhatsApp Facebook X Telegram

SHIVAMOGGA  |  Jan 9, 2024  |  ರಾಜ್ಯ ಸರ್ಕಾರದ 5ನೇ ಗ್ಯಾರಂಟಿಯಾದ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಯ ಉದ್ಘಾಟನೆ ಸಮಾರಂಭ ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಜ.12ರ ಬೆಳಿಗ್ಗೆ 11ಕ್ಕೆ ನಡೆಯಲಿದೆ. ಈ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್​.ಎಸ್​ ಸುಂದರೇಶ್,  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು. 

ಯುವನಿಧಿ ಯೋಜನೆ

ಯುವನಿಧಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಜೊತೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರುಗಳಾದ ಮಧುಬಂಗಾರಪ್ಪ, ಡಾ.ಶರಣ ಪ್ರಕಾಶ್ ಪಾಟೀಲ್, ಡಾ.ಎನ್.ಸಿ. ಸುಧಾಕರ್ ಸೇರಿದಂತೆ ಹಲವು ಸಚಿವರು, ಗಣ್ಯರು, ಅಧಿಕಾರಿಗಳು ಭಾಗವಹಿಸಲಿದ್ದಾರೆ. 

READ : ಕಾಲೇಜಿನಲ್ಲಿ ತರ್ಲೆ ಬ್ಯಾಚ್ ಎಂದೇ ಗುರುತಿಸಿಕೊಂಡಿದ್ದ 1993 ಬ್ಯಾಚ್ ನ ವಿದ್ಯಾರ್ಥಿಗಳಿಗೆ 27 ವರ್ಷ|ಗಳ ನಂತರ ಗುರುಗಳು ಅದ್ದೂರಿ ಕಾರ್ಯಕ್ರಮ ಮಾಡಿ ಸನ್ಮಾನಿಸಿದ್ದು ಯಾಕೆ ಗೊತ್ತಾ ? ಜೆಪಿ ಬರೆಯುತ್ತಾರೆ.

ಜಿಲ್ಲೆ ಮತ್ತು ಇತರೆ ಜಿಲ್ಲೆಗಳಿಂದ ಸುಮಾರು 1ಲಕ್ಷಕ್ಕೂ ಹೆಚ್ಚು ವಿವಿಧ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಮತ್ತು ಸಾರ್ವಜನಿಕರು ಹಾಗೂ ಯುವಕರು ಭಾಗವಹಿಸಲಿದ್ದಾರೆ ಎಂದರು. 

ಪ್ರಧಾನ ಮಂತ್ರಿಗಳು ವರ್ಷಕ್ಕೆ 10 ಸಾವಿರ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ, 10 ಸಾವಿರ ಉದ್ಯೋಗ ಸೃಷ್ಟಿ ಮಾಡುವುದಿರಲಿ, ಇರುವ ಉದ್ಯೋಗವನ್ನು ಕಸಿದುಕೊಂಡಿದ್ದಾರೆ. ರಾಜ್ಯ ಸರ್ಕಾರ ಈಗ ನಿರುದ್ಯೋಗಿಗಳಿಗೆ ಸಹಾಯ ಮಾಡುವ ಹಿನ್ನೆಲೆಯಲ್ಲಿ ಈ ಯೋಜನೆ ಜಾರಿಗೆ ತಂದಿದೆ ಎಂದು ಮಾಹಿತಿ ನೀಡಿದ್ರು.

 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor