SHIVAMOGGA NEWS TODAY

ಹುಲಿಕಲ್ ಘಾಟಿಯಲ್ಲಿ ಭೀಕರ ಭೂಕುಸಿತ, ಸಂಚಾರ ಸಂಪೂರ್ಣ ಸ್ಥಗಿತ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯಲ್ಲಿ ಸಂಭವಿಸಿದ ಭೂಕುಸಿತವು ಮೂವರು ಕಾರ್ಮಿಕರ ಬಲಿ ಪಡೆದಿದೆ. ಈ ದುರಂತದ ಬೆನ್ನಲ್ಲೇ ಸುರಕ್ಷತೆಯ ದೃಷ್ಟಿಯಿಂದ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಶಿವಮೊಗ್ಗದ ಸೂಗೂರಿನಲ್ಲಿ ಆರು ಕಾಲುಗಳ ಕರುವಿನ ಜನನ!

ಹುಲಿಕಲ್ ಘಾಟಿಯ ಪಿನ್ ಪಾಯಿಂಟ್ ಪ್ರದೇಶದಲ್ಲಿ ಬೆಟ್ಟದ ಮಣ್ಣು ಕುಸಿದು ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಮಣ್ಣು ಇಂದಿಗೂ ಸ್ಥಿರವಾಗಿಲ್ಲ ಕ್ಷಣಕ್ಷಣಕ್ಕೂ ಸ್ವಲ್ಪ ಸ್ವಲ್ಪವೇ ಮಣ್ಣು ಕುಸಿಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಮತ್ತಷ್ಟು ದೊಡ್ಡ ಮಟ್ಟದ ಭೂಕುಸಿತ ಸಂಭವಿಸುವ ಭೀತಿಯಿಂದಾಗಿ ಜಿಲ್ಲಾಡಳಿತವು ಮುನ್ನೆಚ್ಚರಿಕಾ ಕ್ರಮವಾಗಿ ರಸ್ತೆ ಬಂದ್ ಮಾಡಿದೆ.

ಪ್ರತಿನಿತ್ಯ ನೂರಾರು ಬಸ್ಸುಗಳು, ಸರಕು ಸಾಗಣೆ ವಾಹನಗಳು ಹಾಗೂ ಪ್ರವಾಸಿಗರಿಂದ ಕಿಕ್ಕಿರಿದು ತುಂಬಿರುತ್ತಿದ್ದ ಈ ರಸ್ತೆಯಲ್ಲಿ ಈಗ ನೀರವ ಮೌನ ಆವರಿಸಿದೆ. ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ.

Hulikal Ghat Closed 3 Workers Dead in Landslide

Hulikal Ghat
Hulikal Ghat
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.