ಗಮನಿಸಿ, ಉಚಿತ ಹೈಬ್ರಿಡ್ ತರಕಾರಿ ಬೀಜ ವಿತರಣೆ; ಅರ್ಜಿ ಸಲ್ಲಿಸಲು ಆಹ್ವಾನ

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕಿನ ರೈತ ಬಾಂಧವರಿಗೆ ತೋಟಗಾರಿಕೆ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. 2025-26ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ರೈತರಿಗೆ ಉಚಿತವಾಗಿ ಹೈಬ್ರಿಡ್ ಹಾಗೂ ಸುಧಾರಿತ ತಳಿಯ ತರಕಾರಿ ಬೀಜಗಳನ್ನು ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

ಶಿವಮೊಗ್ಗದಲ್ಲಿ ಇವತ್ತು ಏನೆಲ್ಲಾ ನಡೆಯಿತು, ಇ-ಪೇಪರ್​​ ಓದಿ

Hybrid Vegetable Seeds ಅರ್ಜಿಗೆ ಬೇಕಾಗುವ ದಾಖಲೆಗಳು

ಈ ಸೌಲಭ್ಯವನ್ನು ಪಡೆಯಲು ಇಚ್ಛಿಸುವ ಎಲ್ಲಾ ವರ್ಗದ ರೈತರು ತಮ್ಮ ಅರ್ಜಿಯೊಂದಿಗೆ ಕೆಳಗಿನ ಪ್ರಮುಖ ದಾಖಲೆಗಳನ್ನು ಲಗತ್ತಿಸಬೇಕಾಗುತ್ತದೆ.

ಇತ್ತೀಚಿನ ಪಹಣಿ (RTC)

ಆಧಾರ್ ಕಾರ್ಡ್ ಪ್ರತಿ

ಬ್ಯಾಂಕ್ ಪಾಸ್‌ಬುಕ್ ಪ್ರತಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ. 

ಈ ಯೋಜನೆಯು “ಮೊದಲು ಬಂದವರಿಗೆ ಮೊದಲ ಆದ್ಯತೆ ಆಧಾರದ ಮೇಲೆ ಜಾರಿಯಲ್ಲಿರುತ್ತದೆ ಎಂದು ಶಿಕಾರಿಪುರ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೀಗಾಗಿ ಆಸಕ್ತ ರೈತರು ತಡ ಮಾಡದೆ ಶೀಘ್ರವಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ. 

ಹೆಚ್ಚಿನ ವಿವರಗಳಿಗಾಗಿ ಅಥವಾ ಅರ್ಜಿ ಸಲ್ಲಿಕೆಗಾಗಿ ಶಿಕಾರಿಪುರದ ತೋಟಗಾರಿಕೆ ಇಲಾಖೆಯ ಕಛೇರಿ ಅಥವಾ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು.

Hybrid Vegetable Seeds in Shikaripura

Hybrid Vegetable Seeds Shikaripura Laborer Dies Shivamogga Court Bhadravati Court Unidentified Man Soraba Ghana Detains Bhadravathi Arson Anandapura Shivamogga Shivaratri Rules Swathantryada Ota Court Orders Walk-in Interview Shivamogga Court KFD Fatality Shivamogga Round up
Hybrid Vegetable Seeds
shivamogga car decor sun control house
shivamogga car decor sun control house