ಮಾ.09 ರಿಂದ ದ್ವಿತೀಯ ಪಿಯು ಪರೀಕ್ಷೆ ! ಜಿಲ್ಲಾಡಳಿತದಿಂದ ಅಧಿಕಾರಿಗಳಿಗೆ ಐದು ಸೂಚನೆ! ಸಿದ್ಧತೆ ಹೇಗಿದೆ? ವಿವರ ಇಲ್ಲಿದೆ

II PU exam slated to begin from March 9 Five instructions from the district administration to the officials! How's the preparation? Here's the details

ಮಾ.09 ರಿಂದ ದ್ವಿತೀಯ ಪಿಯು ಪರೀಕ್ಷೆ ! ಜಿಲ್ಲಾಡಳಿತದಿಂದ ಅಧಿಕಾರಿಗಳಿಗೆ ಐದು ಸೂಚನೆ! ಸಿದ್ಧತೆ ಹೇಗಿದೆ? ವಿವರ ಇಲ್ಲಿದೆ

MALENADUTODAY.COM  |SHIVAMOGGA| #KANNADANEWSWEB

ಶಿವಮೊಗ್ಗ, ಜಿಲ್ಲೆಯಲ್ಲಿ ಮಾರ್ಚ್ 09 ರಿಂದ 29 ರವರೆಗೆ ಒಟ್ಟು 36 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಅಗತ್ಯವಾದ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದರ್ ತಿಳಿಸಿದರು. ಮಾ.03 ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

READ | ಫೋಟೋ ಕ್ಲಿಕ್ಕಿಸುವಾಗ ಇರಲಿ ಎಚ್ಚರ! ಬದುಕಿಗೆ ಕಂಟಕವಾಗಬಲ್ಲದು ಒಂದೇ ಒಂದು ಇಮೇಜ್​! ಸೈಬರ್​ ಕ್ರೈಂ ಅಲರ್ಟ್!

  • ಪರೀಕ್ಷೆಗೆ ಒಟ್ಟು 18,970 ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. 16711 ರೆಗ್ಯುಲರ್ ವಿದ್ಯಾರ್ಥಿಗಳು, 1451 ರಿಪೀಟರ್ ಮತ್ತು 808 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ಶಿವಮೊಗ್ಗ 13, ಭದ್ರಾವತಿ 06, ತೀರ್ಥಹಳ್ಳಿ 03, ಹೊಸನಗರ 03, ಸಾಗರ 05, ಶಿಕಾರಿಪುರ 04 ಮತ್ತು ಸೊರಬ 02 ಸೇರಿ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು.
  • ಪ್ರಶ್ನೆ ಪತ್ರಿಕೆ ಸಾಗಾಟಕ್ಕೆ ತ್ರಿಸದಸ್ಯ ಸಮಿತಿ ನೇಮಿಸಿ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಬಂದೋಬಸ್ತ್ ನೀಡುವ ಬಗ್ಗೆ ಪೊಲೀಸ್ ಇಲಾಖೆಗೆ ಪತ್ರ ಬರೆಯಲಾಗಿದೆ.
  • ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀ. ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.
  • ಪರೀಕ್ಷೆ ಕರ್ತವ್ಯಕ್ಕೆ ಸಂಬಂಧಿಸಿದ ಮಾರ್ಗಾಧಿಕಾರಿಗಳು, ಪರಿವೀಕ್ಷಕರು ಹಾಗೂ ಇನ್ನಿತರೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಕಾರ್ಯಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಈಗಲೇ ಆಸನಗಳು, ಮೂಲಭೂತ ಸೌಕರ್ಯಗಳ ಕುರಿತು ಪರೀಕ್ಷಾ ಕೇಂದ್ರಗಳಿಗೆ ತೆರಳಿ ಖಾತ್ರಿಪಡಿಸಿಕೊಳ್ಳಬೇಕು.
  • ಪರೀಕ್ಷಾ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಮೆಸ್ಕಾಂ ಇಲಾಖೆ ನಿಗಾ ವಹಿಸಬೇಕು.ಹಾಗೂ ಯಾವುದೇ ಗೊಂದಲಗಳಿಗೆ ಎಡೆಮಾಡದೆ, ವ್ಯವಸ್ಥಿತವಾಗಿ ಪರೀಕ್ಷೆ ನಡೆಯಲು ಅಗತ್ಯವಾದ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡು, ಸಿದ್ದವಾಗಿರುವಂತೆ ಸೂಚನೆ ನೀಡಿದರು. 

ಡಿಡಿಪಿಯು ಬಿ.ಕೃಷ್ಣಪ್ಪ, ಪರೀಕ್ಷಾಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ತಿಳಿಸಿದರು. ಸಭೆಯಲ್ಲಿ ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ ಪರೀಕ್ಷೆಯ ಅಧಿಕಾರಿಗಳು ಹಾಜರಿದ್ದರು.

READ |ಜಗಳ ಬಿಡಿಸಲು ಹೋಗಿದ್ದೆ ತಪ್ಪಾಯ್ತು! ಪರಿಚಯಸ್ಥರಿಂದಲೇ ಬಿತ್ತು ಏಟು!

READ |BREAKING NEWS : ಶಿವಮೊಗ್ಗದಲ್ಲಿ ಮತ್ತಿಬ್ಬರ ಮೇಲೆ ಗೂಂಡಾ ಕಾಯ್ದೆ (gunda act) ಜಾರಿ! ವರ್ಷವಿಡಿ ಜೈಲು ಗ್ಯಾರಂಟಿ!