KARNATAKA NEWS/ ONLINE / Malenadu today/ Sep 5, 2023 SHIVAMOGGA NEWS
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರಕ್ಕೆ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಈ ಸಂಬಂಧ ಜಿಲ್ಲಾಡಳಿತ ಪ್ರಕಟಣೆಯನ್ನು ನೀಡಿದೆ
ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ 6, 7 ಮತ್ತು 11 ನೇ ತಿರುವಿನಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡು ಬಂದ ಹಿನ್ನೆಲೆ ದಿ: 15-09-2023 ರವರೆಗೆ ಅಧಿಸೂಚಿಸಲಾಗಿದ್ದ ಭಾರೀ ವಾಹನ ಸಂಚಾರ ನಿಷೇಧವನ್ನು ಹಿಂಪಡೆದು ಸಂಚಾರಕ್ಕೆ ಅನುವು ಮಾಡಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆರ್ ಆದೇಶಿಸಿದ್ದಾರೆ.
ಈ ರಸ್ತೆಯಲ್ಲಿ ಭಾರೀ ವಾಹನ ಸಂಚಾರಕ್ಕೆ ಅನುಮತಿ ನೀಡಬೇಕೆಂದು ಸಾರ್ವಜನಿಕರು, ಜನಪ್ರತಿನಿಧಿಗಳ ಕೋರಿಕೆಯನ್ನು ಪರಿಗಣನೆ ತೆಗೆದುಕೊಂಡು ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧವನ್ನು ಹಿಂಪಡೆದು ಸಂಚಾರಕ್ಕೆ ಅನುವು ಮಾಡಿ ಆದೇಶಿಸಿದ್ದಾರೆ.
ಇನ್ನಷ್ಟು ಸುದ್ದಿಗಳು
ಬಾರ್ನಲ್ಲಿ ಎಣ್ಣೆ ಕೊಡ್ಲಿಲ್ಲ ಎಂದು ಸಿಬ್ಬಂದಿಯನ್ನ ಅಟ್ಟಾಡಿಸಿ ಹಲ್ಲೆ! ಬಿಹೆಚ್ ರೋಡ್ನಲ್ಲಿ ನಿನ್ನೆ ನಡೆದಿದ್ದೇನು?
ಸಚಿವರ ಶಾಕ್/ 48 ಗಂಟೆಯಲ್ಲಿ ಬದಲಾಯ್ತು ಶಿವಮೊಗ್ಗ AIRPORT ನಲ್ಲಿದ್ದ ಈ ವ್ಯವಸ್ಥೆ!