ಸಿವಿಲ್ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳಿಗೆ ಪರೀಕ್ಷೆ ಸಂಬಂಧ ಎಸ್​ಪಿ ಮಿಥುನ್ ಕುಮಾರ್ ಮಹತ್ವದ ಪ್ರಕಟಣೆ

Malenadu Today

 Shivamogga Feb 12, 2024ಸಿವಿಲ್ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಗೆ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದ್ದು ಈ ಸಂಬಂಧ ಪ್ರಕಟಣೆ ನೀಡಲಾಗಿದೆ 

Civil Police Constable Post

ಕರ್ನಾಟಕ ರಾಜ್ಯ ಪೆÇಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್​ ಕಾನ್ಸ್‍ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ) & (ತೃತೀಯ ಲಿಂಗ ಪುರುಷ ಮತ್ತು ಮಹಿಳಾ) ಹಾಗೂ ಸೇವಾನಿರತ & ಬ್ಯಾಕ್‍ಲಾಗ್-1137 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ದಿನಾಂಕ: 25.02.2024 ರಂದು ಬೆಳಗ್ಗೆ 11:00 ರಿಂದ 12:30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಸಲಾಗುವುದು. 

ಈ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್.ಎಂ.ಎಸ್. ಮೂಲಕ ಮಾಹಿತಿಯನ್ನು ನೀಡಲಾಗುವುದು ಹಾಗೂ ಕರಪತ್ರದ ಲಿಂಕ್ ಅನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‍ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಲು ಸೂಚಿಸಿದೆ ಹಾಗೂ ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಈ ಕೆಳಕಂಡ ವಸ್ತ್ರ ಸಂಹಿತೆಯನ್ನು ಪಾಲಿಸತಕ್ಕದ್ದು.

ಈ ಲಿಖಿತ ಪರೀಕ್ಷೆಗೆ ಹಾಜರಾಗುವ ಪುರುಷ ಮತ್ತು ತೃತಿಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು. ಜಿಪ್ ಪ್ಯಾಕೆಟ್‍ಗಳು, ದೊಡ್ಡ ಬಟನ್‍ಗಳು ಇರುವ ಶರ್ಟ್‍ಗಳನ್ನು ಧರಿಸಬಾರದು.  ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‍ಗಳನ್ನು ಧರಿಸತಕ್ಕದ್ದಲ್ಲ. ಪರೀಕ್ಷಾ ಕೇಂದ್ರದೊಳಗೆ ಷೂಗಳನ್ನು ನಿಷೇಧಿಸಲಾಗಿದ್ದು, ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು ಧರಿಸುವುದು. ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಲಾಗಿದೆ. 

ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬೂಬ್‍ಗಳು ಅಥವಾ ಬಟನ್‍ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು / ಜೀನ್ಸ್ ಪ್ಯಾಂಟ್ ಮುಜುಗರವಾಗದಂತೆ ಅಭ್ಯರ್ಥಿಗಳು ಧರಿಸುವಂತೆ ನಿರ್ದೇಶಿಸಲಾಗಿದೆ. ಎತ್ತರವಾದ ಹಿಮ್ಮಡಿಯ ಶೂಗಳನ್ನು / ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ/ ಚಪ್ಪಲಿಗಳನ್ನಾಗಲಿ ಧರಿಸಬಾರದು. ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ. ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದು ನಿಷೇಧಿಸಿದೆ  ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Share This Article