ರಾಗಿಗುಡ್ಡದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣ! ಶಿವಮೊಗ್ಗ ಉಸ್ತುವಾರಿ ಸಚಿವರ ದಿಢೀರ್​ ಭೇಟಿ! ಕುತೂಹಲ ಮೂಡಿಸಿದ ಮಧು ಬಂಗಾರಪ್ಪ!

Malenadu Today

KARNATAKA NEWS/ ONLINE / Malenadu today/ Oct 3, 2023 SHIVAMOGGA NEWS

ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ನಡೆದ ಘಟನೆ ರಾಜ್ಯಮಟ್ಟದಲ್ಲಿ ಸುದ್ದಿಯಾದ ಬೆನ್ನಲ್ಲೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶಿವಮೊಗ್ಗಕ್ಕೆ ದಿಢೀರ್ ಭೇಟಿ ನೀಡುತ್ತಿದ್ದಾರೆ. ಘಟನೆ ಡನೆದ ಸ್ಥಳಕ್ಕೆ  ಇವತ್ತು ಬೆಳಗ್ಗೆ ಒಂಬತ್ತು ಗಂಟೆ ಸುಮಾರಿಗೆ ಅವರು ಭೇಟಿ ನೀಡಲಿದ್ದು, ಅಲ್ಲಿ ಅಧಿಕಾರಿಗಳ ಜೊತೆಗೆ ಮಾತನಾಡಲಿದ್ದಾರೆ. ಆನಂತರ ಸ್ಥಳಿಯರಿಂದಲೂ ಮಾಹಿತಿ ಪಡೆಯಲಿದ್ದಾರೆ. ಬಳಿಕ ಮೆಗ್ಗಾನ್ ಆಸ್ಪತ್ರೆಗೆ ಭೇಟಿಕೊಟ್ಟು, ಅಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ. ಆ ಬಳಿಕ ಮಾಧ್ಯಮಗಳೊಂದಿಗೆ ಮಧು  ಬಂಗಾರಪ್ಪ ಮಾತನಾಡಲಿದ್ದು, ಅವರ ಈ ಭೇಟಿ ಕುತೂಹಲ ಮೂಡಿಸಿದೆ.  

ಮೊನ್ನೆ ನಡೆದ ಕಲ್ಲೂತೂರಾಟದ ಘಟನೆ ಬಳಿಕ ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಮತ್ತು ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಸೇರಿದಂತೆ ಹಲವು ಬಿಜೆಪಿಗರು ಗಾಯಾಳುಗಳನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದರು. ಅಲ್ಲದೆ ಸ್ಥಳಕ್ಕೆ ಭೇಟಿಕೊಟ್ಟು ಆಕ್ರೋಶ ಹೊರಹಾಕಿದ್ದರು. ಈ ಮಧ್ಯೆ ಕಾಂಗ್ರೆಸ್ ಮುಖಂಡರ ಸುಳಿವಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಸಚಿವರು ಬಂದಿಲ್ಲ ಎಂಬ ಮಾತು ಕೇಳಲಾರಂಭವಾಗಿತ್ತು. ಅಷ್ಟರಲ್ಲಿಯೇ ಸಚಿವ ಮಧು ಬಂಗಾರಪ್ಪರವರು  ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. 


ಇನ್ನಷ್ಟು ಸುದ್ದಿಗಳು 

  1.  ರಾಗಿಗುಡ್ಡದಲ್ಲಿ ಪರಿಸ್ಥಿತಿ ತಿಳಿಗೊಳಿಸಲು ತೆರಳಿದ್ದ ಎಸ್​ಪಿ ಮತ್ತು ಪೊಲೀಸರ ಮೇಲೆ ಕಲ್ಲು ! ಸ್ಥಳದಲ್ಲಿ 144 ಸೆಕ್ಷನ್​ ಜಾರಿ! ಲಾಠಿ ಪ್ರಹಾರ

  2. ನಮಗೆ ಬೆಲೆ ಇರುತ್ತಲ್ಲ ಎಂದು ಪ್ರಶ್ನಿಸಿದ ಬಾಲಕಿ! ಶಿಕ್ಷಕರ ಹಾಗೆ ವಿದ್ಯಾರ್ಥಿನಿಗೆ ಅರ್ಥ ಮಾಡಿಸಿದ ಸಚಿವ! ವೈರಲ್​ ಆಯ್ತು ವಿಡಿಯೋ!


 

Share This Article