KARNATAKA NEWS/ ONLINE / Malenadu today/ Oct 13, 2023 SHIVAMOGGA NEWS
ಆಕಸ್ಮಿಕ ಘಟನೆಯೊಂದದರಲ್ಲಿ ರಾಘವೇಶ್ವರ ಶ್ರೀಗಳ ತಾಯಿಯವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಹೊಸನಗರ ತಾಲೂಕಿನ ಶ್ರೀ ರಾಮಚಂದ್ರಾ ಪುರ ಮಠದ ಶ್ರೀ ರಾಘವೇಶ್ವರ ಶ್ರೀಗಳ ಮಾತೃಶ್ರೀ ವಿಜಯಲಕ್ಷ್ಮಿ ಅವರು ಪ್ರಯಾಣಿಸುತ್ತಿದ್ದ ಕಾರು ಶಿವಮೊಗ್ಗ-ಸಾಗರ ನಡುವಿನ ತುಪ್ಪೂರು ಬಳಿ ಗುರುವಾರ ಸಂಜೆ ಅಪಘಾತಕ್ಕೀಡಾಗಿದೆ.
ಕಾರಿನಲ್ಲಿದ್ದ ವಿಜಯಲಕ್ಷ್ಮಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕುಂಸಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ನಗರದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು ಶ್ರೀಘ್ರದಲ್ಲಿಯೇ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.
ತುಮರಿಯಲ್ಲಿರುವ ತಮ್ಮ ಊರಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ನಾಯಿ ಅಡ್ಡ ಬಂದಿದ್ದು, ಅದನ್ನು ತಪ್ಪಿಸಲು ಕಾರು ಚಾಲಕ ಮುಂದಾದಾಗ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಇನ್ನಷ್ಟು ಸುದ್ದಿಗಳು