ಶಿವಮೊಗ್ಗದಲ್ಲಿ ಕಾಂಗ್ರೆಸ್ ಬಂಡಾಯ ಶಮನ! ನಾಮಪತ್ರ ವಾಪಸ್!

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Apr 24, 2023 GOOGLE NEWS


ಶಿವಮೊಗ್ಗ/  ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ನಿರೀಕ್ಷೆಯಂತೆ, ಕಾಂಗ್ರೆಸ್​ನ ಬಂಡಾಯ ತಣ್ಣಗಾಗಿದೆ. ಪರಿಣಾಮ ಅಭ್ಯರ್ಥಿ  ಶ್ರೀನಿವಾಸ್ ಕರಿಯಣ್ಣರಿಗೆ ಬಿಗ್ ರಿಲೀಫ್‌ ಸಿಕ್ಕಿದ್ದಂತಾಗಿದೆ. 

 ಕಾಂಗ್ರೆಸ್​ನಿಂದ ಬಂಡಾಯವೆದ್ದು  ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿದಿದ್ದ ನಾರಾಯಣಸ್ವಾಮಿ, ಎಸ್.ರವಿಕುಮಾರ್ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. 

 

ಈ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರು ನಡೆಸಿದ ಸಂಧಾನ ಯಶಸ್ವಿಯಾಗಿದೆ. 

 

ಈ ಮೊದಲು ಟಿಕೆಟ್‌ನಿಂದ ವಂಚಿತರಾಗಿದ್ದ ಕ್ಷೇತ್ರದ ಪ್ರಬಲ ಆಕಾಂಕ್ಷಿಗಳ ಪೈಕಿ ನಾರಾಯಣಸ್ವಾಮಿ, ರವಿಕುಮಾರ್ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ತೀರ್ಮಾನಿಸಿ ನಾಮಪತ್ರ ಸಲ್ಲಿಸಿದ್ದರು.

 

 ಇದೀಗ ಪಕ್ಷದ ನಾಯಕರು ಅಸಮಾಧಾನವನ್ನು ಶಮನಗೊಳಿಸಿ ನಾಮಪತ್ರ ಹಿಂಪಡೆಸುವಲ್ಲಿ ಯಶಸ್ವಿಯಾಗಿದ್ದಾರೆ. 

  

Malenadutoday.com Social media

 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor