KARNATAKA NEWS/ ONLINE / Malenadu today/ Sep 26, 2023 SHIVAMOGGA NEWS’
ಶಿವಮೊಗ್ಗ ನಗರದಲ್ಲಿ ವಿವಿಧೆಡೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ನೀರು ಸರಭರಾಜು ಹಾಗೂ ಒಳಚರಂಡಿ ಮಂಡಳಿ ಪ್ರಕಟಣೆಯನ್ನ ನೀಡಿದೆ.
ನಗರದ ವಿವಿಧೆಡೆ ಕುಡಿಯುವ ನೀರು ವ್ಯತ್ಯಯ
ಶಿವಮೊಗ್ಗ ನಗರದ ಸವಳಂಗ ರಸ್ತೆಯಲ್ಲಿ ನಿರ್ಮಿಸುತ್ತಿರುವ ರೈಲ್ವೆ ಮೇಲುಸೇತುವೆ ಬಳಿ ಸ್ಮಾರ್ಟ್‍ಸಿಟಿ ಕೊಳವೆ ಮಾರ್ಗ ಬದಲಾಯಿಸುವ ಕಾಮಗಾರಿ ಕೈಗೊಳ್ಳಲಾಗಿದೆ.
ಈ ನಿಟ್ಟಿನಲ್ಲಿ ಇದೇ ಸೆ. 27 ಮತ್ತು 28 ರಂದು ನಗರದ ಬಸವೇಶ್ವರನಗರ, ನವುಲೆ, ಕುವೆಂಪು ಬಡಾವಣೆ, ಅಶ್ವಥ್‍ನಗರ, ಎಲ್.ಬಿ.ಎಸ್.ನಗರ, ಕೃಷಿನಗರ, ಶಾಂತಿನಗರ, ತ್ಯಾವರೆಚಟ್ನಳ್ಳಿ, ಬೊಮ್ಮನಕಟ್ಟೆ, ದೇವರಾಜ್‍ಅರಸ್ ಬಡಾವಣೆ, ಸಹ್ಯಾದ್ರಿನಗರ, ಜೆ.ಹೆಚ್.ಪಟೇಲ್ ಬಡಾವಣೆ, ಶಾರದಮ್ಮ ಬಡಾವಣೆ, ಸಹಕಾರಿನಗರ, ಖಾಜಿ ಖಾನ್ ಬಡಾವಣೆ, ಸೋಮಿನಕೊಪ್ಪ ಹಾಗೂ ಈ ಬಡಾವಣೆಗಳಿಗೆ ಹೊಂದಿಕೊಂಡಂತಹ ಬಡಾವಣೆಗಳಲ್ಲಿ ದೈನಂದಿನ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಈ ಸಂಬಂಧ ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನಷ್ಟು ಸುದ್ದಿಗಳು