ನಿದ್ರೆ ಮಂಪರು | ಗೂಡ್ಸ್​ ಗಾಡಿಗೆ ಕೊರಿಯರ್ ಲಾರಿ ಡಿಕ್ಕಿ | ಜಿಂಕೆ ಅಡ್ಡ ಬಂದು ಕಾರು ಪಲ್ಟಿ

Malenadu Today

KARNATAKA NEWS/ ONLINE / Malenadu today/ Oct 21, 2023 SHIVAMOGGA NEWS

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕು ಬಣಕಲ್​ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ನಿಂತಿದ್ದ ಗೂಡ್ಸ್​ ವೆಹಿಕಲ್​ಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಗೂಡ್ಸ್​ ವಾಹನ ಪಲ್ಟಿಯಾಗಿದ್ದು, ಅದರಲ್ಲಿರುವ ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿವೆ. ಘಟನೆ ಬೆನ್ನಲ್ಲೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ವಾಹನಗಳನ್ನು ತೆರವುಗೊಳಿಸಿದ್ದಾರೆ. 

ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ | ದಸರಾ ಹಬ್ಬಕ್ಕಾಗಿ 34 ವಿಶೇಷ ರೈಲು ಸಂಚಾರ | ಶಿವಮೊಗ್ಗ ಟ್ರೈನ್​ ವಿವರ ಇಲ್ಲಿದೆ

ಬೆಂಗಳೂರಿನಿಂದ ಮಂಗಳೂರಿಗೆ ಕೊರಿಯರ್​ಗಳನ್ನು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಗೂಡ್ಸ್​ ವಾಹನ ಬೇಲೂರಿನಿಂದ ಮೂಡಬಿದ್ರೆಗೆ ಹೋಗುತ್ತಿತ್ತು. ನಿದ್ರೆ ಮಂಪರಿನ ಕಾರಣಕ್ಕೆ, ಚಾಲಕ ಗಾಡಿ ಸೈಡ್​ಗೆ ಹಾಕಿದ್ದರು. ಇದೇ ವೇಳೆ ಲಾರಿಯಲ್ಲಿದ್ದ ಡ್ರೈವರ್ ಸಹ ನಿದ್ರೆ ಮಂಪರ್​ನಲ್ಲಿ ಗೂಡ್ಸ್​ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇನ್ನೊಂದು ಘಟನೆಯಲ್ಲಿ ಹೊರನಾಡಿನಿಂದ ಮೂಡಿಗೆರೆಗೆ ಹೋಗುತ್ತಿದ್ದ ಕಾರೊಂದು ಪಲ್ಟಿಯಾದ ಘಟನೆ ಬಗ್ಗೆ ವರದಿಯಾಗಿದೆ. ಜಿಂಕೆಯೊಂದು ಕಾರಿಗೆ ಅಡ್ಡಬಂದ ಪರಿಣಾಮ ಕಾರು ಪಲ್ಟಿಯಾಗಿದೆ. ಸಂಪಿಗೆಖಾನ್ ಬಳಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಅಡ್ಡ ಬಂದ ಜಿಂಕೆಯನ್ನು ತಪ್ಪಿಸಲು ಮುಂದಾದಾಗ, ಕಾರು ರಸ್ತೆಪಕ್ಕದ ಚರಂಡಿಗೆ ಉರುಳಿ, ಪಲ್ಟಿಯಾಗಿದೆ. ಇನ್ನೂ ಘಟನೆಯಲ್ಲಿ  ಇಬ್ಬರಿಗೆ ಗಾಯವಾಗಿದೆ.   


ಇನ್ನಷ್ಟು ಸುದ್ದಿಗಳು 

ಶೇ…ಹಾವು ಕಚ್ಚಿತು | ಮನೆ ಬಳಿ ಬಂದ ನಾಗರವನ್ನು ಹಿಡಿಯಲು ಹೋದವರ ಸ್ಥಿತಿ ಗಂಭೀರ | VIDEO VIRAL

ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ | ಪೂರ್ತಿ ವಿವರ ಇಲ್ಲಿದೆ

ಶಿವಮೊಗ್ಗ ದಸರಾಕ್ಕೆ ಚಾಲನೆ | ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಪಾಲಿಕೆ ಸದಸ್ಯರು | ಕುಣಿದು ಸಂಭ್ರಮಿಸಿದ ಶಾಸಕ ಎಸ್​.ಎನ್​. ಚನ್ನಬಸಪ್ಪ


 

Share This Article