ಶಿವಮೊಗ್ಗ -ತೀರ್ಥಹಳ್ಳಿ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು! ಕುತೂಹಲ ಮೂಡಿಸಿದ ಘಟನೆ!

ಹಂಚಿಕೊಳ್ಳಿ
WhatsApp Facebook X Telegram
ಶಿವಮೊಗ್ಗ -ತೀರ್ಥಹಳ್ಳಿ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು!  ಕುತೂಹಲ ಮೂಡಿಸಿದ ಘಟನೆ!

KARNATAKA NEWS/ ONLINE / Malenadu today/ Sep 26, 2023 SHIVAMOGGA NEWS’ 

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕಾರೊಂದು ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆಯೊಂದು ಸಂಭವಿಸಿದೆ. ಘಟನೆಯಲ್ಲಿ  ಕಾರು ಸಂಪೂರ್ಣ ಸುಟ್ಟುಹೋಗಿದ್ದು ಪ್ರಕರಣ ಇನ್ನಷ್ಟು ಕುತೂಹಲ ಮೂಡಿಸ್ತಿದೆ. 

ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆಯ 15 ನೇ ಮೈಲಿಕಲ್ಲಿನ ಸಮೀಪ ಈ ಘಟನೆ ಸಂಭವಿಸಿದೆ. ರಾತ್ರಿ 11.30 ರ ಸುಮಾರಿಗೆ ಘಟನೆ ನಡೆದಿದ್ದು, ಸ್ಥಳೀಯರು ಹಾಗೂ ಅದೇ ಮಾರ್ಗವಾಗಿ ಹೋಗುತ್ತಿದ್ದ ವಾಹನ ಸವಾರು ಕಾರಿಗೆ ಬೆಂಕಿ ಬಿದ್ದು ಉರಿಯುತ್ತಿರುವುದನ್ನ ಗಮನಿಸಿದ್ದಾರೆ. 

ಇನ್ನೂ ವಿಷಯ ಗೊತ್ತಾಗುತ್ತಲೇ ಅಗ್ನಿಶಾಮಕ ಸಿಬ್ಬಂದಿ ಶಿವಮೊಗ್ಗದಿಂದ ಸ್ಥಳಕ್ಕೆ ತೆರಳಿದ್ದು ಬೆಂಕಿ ನಂದಿಸಿದ್ದಾರೆ. ಆದರೆ ಕಾರು ಯಾರದ್ದು, ಅದರಲ್ಲಿ ಯಾರಿದ್ದರು ಎಂಬಿತ್ಯಾದಿ ಮಾಹಿತಿ ಇನ್ನೂ ಕೂಡ ಸ್ಪಷ್ಟವಾಗಿಲ್ಲ. ಕಾರಿನ ನೋಂದಣಿ ಸಂಖ್ಯೆ ಕೂಡ ಕಾಣದಿರುವಷ್ಟರ ಮಟ್ಟಿಗೆ ಕಾರು ಸುಟ್ಟುಹೋಗಿದೆ. 


ಇನ್ನಷ್ಟು ಸುದ್ದಿಗಳು 

  1. BREAKING NEWS / ಜೋಗದ ಸಮೀಪ ನೀರಿಗಿಳಿದಿದ್ದ ಓರ್ವ ಅಧಿಕಾರಿ ಮತ್ತು ಬ್ಯಾಂಕ್ ಉದ್ಯೋಗಿ ಸಾವು! ಕಾರ್ಗಲ್​ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದ್ದೇನು?

  2. ಲೋಡ್ ಗಾಡಿಯಿಂದ ಬಿದ್ದ ಮರದ ತುಂಡು ಬಡಿದು ಬೈಕ್​ ಸವಾರನ ಸ್ಥಿತಿ ಗಂಭೀರ! ಹೀಗೂ ಆಗುತ್ತೆ ಹುಷಾರು ತಪ್ಪದಿರಿ ವಾಹನ ಸವಾರರೇ?

  3. ದೌರ್ಜನ್ಯ ಪ್ರಕರಣ ! ಶಿವಮೊಗ್ಗ ಡಿಸಿಯಿಂದ 15 ಸೂಚನೆ! ಯುವಕನ ಸಾವು, ಮರಳು, ಅಧಿಕಾರಿಗಳಿಂದ ಕಿರುಕುಳ ಬಗ್ಗೆ ಜಿಲ್ಲಾಧಿಕಾರಿ ಹೇಳಿದ್ದೇನು?


 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor