BIGNEWS | ಶಿವಮೊಗ್ಗದಲ್ಲಿ ಮೂರು ದಿನ ಆರೆಂಜ್‌ ಅಲರ್ಟ್‌ | ಕರಾವಳಿಯಲ್ಲಿ ರೆಡ್‌ ಅಲರ್ಟ್!‌

india Meteorological Department has issued a red alert for Dakshina Kannada, Udupi, and Kodagu districts, and an orange alert for Shivamogga and Chikkamagaluru districts

BIGNEWS | ಶಿವಮೊಗ್ಗದಲ್ಲಿ ಮೂರು ದಿನ ಆರೆಂಜ್‌ ಅಲರ್ಟ್‌ | ಕರಾವಳಿಯಲ್ಲಿ ರೆಡ್‌ ಅಲರ್ಟ್!‌
india Meteorological Department ,red alert , Dakshina Kannada, Udupi, Kodagu districts, orange alert , Shivamogga, Chikkamagaluru districts

SHIVAMOGGA | MALENADUTODAY NEWS | Jun 23, 2024  ಮಲೆನಾಡು ಟುಡೆ 

ಶಿವಮೊಗ್ಗ ಜಿಲ್ಲೆಯು ಸೇರಿದಂತೆ ಇವತ್ತಿನಿಂದ ಮೂರು ದಿನಗಳ ಕಾಲ ಉತ್ತರಕನ್ನಡ , ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರೆಂಜ್‌ ಅಲರ್ಟ್‌ ನೀಡಲಾಗಿದ್ದು, ದಕ್ಷಿಣ ಕನ್ನಡ ಉಡುಪಿ ಕೊಡಗು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಪರಿಣಾಮ ಮುಂಗಾರಿನ ಅಬ್ಬರ ಜೋರಾಗಿರಲಿದ್ದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ,   (23ನೇ ಜೂನ್ 2004): ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಚದುರಿದ ಭಾರೀ ಮಳೆಯೊಂದಿಗೆ ಅತಿ ಭಾರೀ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಗಾಳಿಯೊಂದಿಗೆ (30-40 kmph) ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಗಾಳಿಯೊಂದಿಗೆ (30-40 kmph) ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.



(24ನೇ ಜೂನ್ 2004): ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಚದುರಿದಂತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕರ್ನಾಟಕದ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ದಾವಣಗೆರೆ ಮತ್ತು ಮೈಸೂರು ಜಿಲ್ಲೆಗಳಲ್ಲಿ ಚದುರಿದ ಭಾರೀ ಗಾಳಿಯೊಂದಿಗೆ (30-40 kmph) ಸಂಯೋಜಿತವಾಗಿರುವ ಅತಿ ಹೆಚ್ಚು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕರ್ನಾಟಕದ ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಚದುರಿದ ಭಾರೀ ಗಾಳಿಯೊಂದಿಗೆ (30-40 kmph) ಒಂದು ಅಥವಾ ಎರಡು ಸ್ಥಳಗಳಲ್ಲಿ ಅತಿ ಹೆಚ್ಚು ಭಾರೀ ಮಳೆಯಾಗುವ ಸಾಧ್ಯತೆಯಿದೆ.



(25ನೇ ಜೂನ್ 2024): ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕರ್ನಾಟಕದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಚದುರಿದ ಭಾರೀ ಗಾಳಿಯೊಂದಿಗೆ (30-40 kmph) ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಗಾಳಿಯೊಂದಿಗೆ (30-40 kmph) ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.


The India Meteorological Department has issued a red alert for Dakshina Kannada, Udupi, and Kodagu districts, and an orange alert for Shivamogga and Chikkamagaluru districts  very heavy rainfall with thunderstorms and strong winds (30-40 kmph) are expected in these areas.