indian test cricket : ಜೂನ್ 20 ರಂದು ಹೆಡಿಂಗ್ಲಿಯಲ್ಲಿ ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿ ಆರಂಭವಾಗಲಿದೆ. ಇಂಗ್ಲೆೆಂಡ್ ವಿರುದ್ದ ಟೆಸ್ಟ್ ಸರಣಿಗೆ ಬಿಸಿಸಿಐ ಆಯ್ಕೆ ಸಮಿತಿ ಇಂದು ಟೀಂ ಇಂಡಿಯಾ ಆಟಗಾರರ ಪಟ್ಟಿ ಬಿಡುಗಡೆ ಮಾಡಿದೆ. ಭಾರತ ಟೆಸ್ಟ್ ಟೀಂ ನ 37 ನೇ ಕ್ಯಾಪ್ಟನ್ ಆಗಿ ಶುಭಮನ್ ಗಿಲ್ ಆಯ್ಕೆ ಮಾಡಲಾಗಿದ್ದು, ಉಪನಾಯಕನಾಗಿ ರಿಷಬ್ ಪಂತ್ ರನ್ನು ನೇಮಿಸಲಾಗಿದೆ.
ಈಗಾಗಲೇ ಭಾರತ ಕ್ರಿಕೆಟ್ ತಂಡದ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಹಿರಿಯರ ಅನುಪಸ್ಥಿತಿಯಲ್ಲಿ ಯುವ ಆಟಗಾರರಿಗೆ ಬಿಸಿಸಿಐ ಮಣೆ ಹಾಕಿದೆ. ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳಿಗೆ 18 ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗಿದೆ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಮತ್ತು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಮಂಡಳಿಯ ಪ್ರಧಾನ ಕಚೇರಿಯಲ್ಲಿ ಸಭೆ ನಡೆಸಿದರು. ಈ ಸಭೆಯಲ್ಲಿ 18 ಜನ ಆಟಗಾರರಿರುವ ತಂಡವನ್ನು ಆಯ್ಕೆ ಮಾಡಿದ್ದಾರೆ.
indian test cricket : ಈ ಬಾರಿಯ ಟೆಸ್ಟ್ ತಂಡದಲ್ಲಿ ಮೂರು ಜನ ಕರ್ನಾಟಕದವರಿದ್ದಾರೆ. ತಂಡದಲ್ಲಿ ಕರುಣ್ ನಾಯರ್, ಕೆಎಲ್ ರಾಹುಲ್ ಹಾಗೂ ಪ್ರಸಿದ್ ಕೃಷ್ಣ ಸ್ಥಾನ ಪಡೆದಿದ್ದಾರೆ. ಫಿಟ್ನೆಸ್ ಸಮಸ್ಯೆಗಳಿಂದ ಬಳಲುತ್ತಿರುವ ಮೊಹಮ್ಮದ್ ಶಮಿ ಅವರನ್ನು ತಂಡದಿಂದ ಕೈ ಬಿಟ್ಟಿದ್ದು, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ 18 ರ ಬಳಗವನ್ನು ಸೇರಿಕೊಂಡಿದ್ದಾರೆ.
ಶುಭಮನ್ಗಿಲ್ಗೆ ಇಗಾಗಲೇ 25 ವರ್ಷ ತುಂಬಿದ್ದು ಇತ್ತೀಚಿನ ವರ್ಷಗಳಲ್ಲಿ ಟೆಸ್ಟ್ ಸಾರಥ್ಯವನ್ನು ವಹಿಸಿಕೊಂಡ ಅತ್ಯಂತ ಕಿರಿಯ ಆಟಗಾರರಲ್ಲಿ ಗಿಲ್ ಕೂಡಾ ಒಬ್ಬರಾಗಿದ್ದಾರೆ. ಹಾಗೆಯೇ ಗಿಲ್ 2024 ರಲ್ಲಿ ಜಿಂಬಾಬ್ವೆಯಲ್ಲಿ ನಡೆದ ಟಿ 20 ಪಂದ್ಯಗಳಲ್ಲಿ ಭಾರತ ತಂಡದ ನಾಯಕನಾಗಿ ಕಾರ್ಯ ನಿರ್ವಹಿಸಿದ ಅನುಭವಿದೆ. ಟೆಸ್ಟ್ನಲ್ಲಿ ಉಪನಾಯಕನಾಗಿ ಹಾಗೂ ಪ್ರಸ್ತುತ ಐಪಿಎಲ್ನ ಗುಜರಾತ್ ತಂಡದ ನಾಯಕನಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದಾರೆ. ಇದುವರೆಗೂ ಟೆಸ್ಟ್ ಕ್ರಿಕೆಟ್‌ನಲ್ಲಿ, ಗಿಲ್ 32 ಪಂದ್ಯಗಳನ್ನು ಆಡಿದ್ದು, ಐದು ಶತಕಗಳು ಸೇರಿದಂತೆ 1,893 ರನ್‌ಗಳನ್ನು ಗಳಿಸಿದ್ದಾರೆ.
indian test cricket : ಟೆಸ್ಟ್ ಟೀಂ 18 ಆಟಗಾರರ ಬಳಗ ಇಂತಿದೆ.
ಶುಭಮನ್ ಗಿಲ್ (ನಾಯಕ),ರಿಷಭ್ ಪಂತ್ (ವಿಕೆಟ್ ಕೀಪರ್) (ಉಪನಾಯಕ), ಯಶಸ್ವಿ ಜೈಸ್ವಾಲ್ ,ಕೆಎಲ್ ರಾಹುಲ್ ,ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ , ರವೀಂದ್ರ ಜಡೇಜಾ, ಧ್ರುವ್ ಜುರೆಲ್ ,ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಎಂ.ಡಿ. ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಅರ್ಶ್ದೀಪ್ ಸಿಂಗ್,ಕುಲದೀಪ್ ಯಾದವ್, ಟೆಸ್ಟ್ನಲ್ಲಿ ಸ್ಥಾನ ಪಡೆದಿದ್ದಾರೆ.