ಶಿವಮೊಗ್ಗ-ಬೆಂಗಳೂರು ಇಂಡಿಗೋ ವಿಮಾನ ಸಂಚಾರ ಮೇ 1ರಿಂದ ತಾತ್ಕಾಲಿಕ ಸ್ಥಗಿತ

ಹಂಚಿಕೊಳ್ಳಿ
WhatsApp Facebook X Telegram
Indigo Flights Suspended from Shivamogga to Bengaluru Shimoga IndiGo Flight Services to Stop from May 1
Indigo Flights Suspended from Shivamogga to Bengaluru Shimoga IndiGo Flight Services to Stop from May 1

ಶಿವಮೊಗ್ಗ : ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ಸಂಚರಿಸುವ ಇಂಡಿಗೋ ಏರ್‌ಲೈನ್ಸ್ ವಿಮಾನ ಸೇವೆಯು ಮೇ 1ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯದ (DGCA) ನೂತನ ಮಾರ್ಗಸೂಚಿಗಳ ಅನ್ವಯ ಪೈಲಟ್‌ಗಳ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 

ಹವಾಮಾನ ಮುನ್ಸೂಚನೆ! ಶಿವಮೊಗ್ಗ : ಇನ್ನೈದು ದಿನ ಗುಡುಗು, ಗಾಳಿ, ಮಳೆ!

ಕಳೆದ 2025ರ ಜೂನ್‌ನಲ್ಲಿ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತದ ನಂತರ, ಡಿಜಿಸಿಎ ವಿಮಾನಗಳ ಸುರಕ್ಷಿತ ಕಾರ್ಯಾಚರಣೆಗೆ ಕಠಿಣ ನಿಯಮಾವಳಿಗಳನ್ನು ಜಾರಿಗೊಳಿಸಿದೆ. ಈ ನಿಯಮಗಳನ್ನು ಪಾಲಿಸಲು ವಿಮಾನಯಾನ ಸಂಸ್ಥೆಗಳಿಗೆ ಒಂದು ವರ್ಷದ ಕಾಲಾವಕಾಶ ನೀಡಲಾಗಿತ್ತು. ಈ ಹೊಸ ತಾಂತ್ರಿಕ ಬದಲಾವಣೆ ಹಾಗೂ ನಿಯಮಗಳಿಂದಾಗಿ ಇಂಡಿಗೋ ಸಂಸ್ಥೆಗೆ ಪೈಲಟ್‌ಗಳ ಕೊರತೆ ಉಂಟಾಗಿದ್ದು, ಸುಮಾರು ಮೂರು ತಿಂಗಳ ಕಾಲ ಕಾರ್ಯಾಚರಣೆ ಸ್ಥಗಿತಗೊಳಿಸುವುದಾಗಿ ಸಂಸ್ಥೆ ತಿಳಿಸಿದೆ. 

ಶಿವಮೊಗ್ಗ ನಿಲ್ದಾಣದಿಂದ ಪ್ರಸ್ತುತ ಸ್ಟಾರ್ ಏರ್ ಮತ್ತು ಸ್ಪೈಸ್ ಜೆಟ್ ಸಂಸ್ಥೆಗಳು ಹೈದರಾಬಾದ್, ಗೋವಾ, ತಿರುಪತಿ ಹಾಗೂ ಚೆನ್ನೈಗೆ ವಿಮಾನ ಹಾರಾಟ ನಡೆಸುತ್ತಿವೆ. ಆದರೆ, ಶಿವಮೊಗ್ಗ-ಬೆಂಗಳೂರು ಮಾರ್ಗದಲ್ಲಿ ಅತಿ ಹೆಚ್ಚು ಜನದಟ್ಟಣೆ ಇರುವುದರಿಂದ, ಇಂಡಿಗೋ ವಿಮಾನ ಸಂಚಾರ ಸ್ಥಗಿತಗೊಳ್ಳುತ್ತಿರುವುದು ಈ ಮಾರ್ಗದ ಪ್ರಯಾಣಿಕರಿಗೆ ತುಸು ಹಿನ್ನಡೆಯಾಗಲಿದೆ.

Indigo Flights Suspended from Shivamogga to Bengaluru

Indigo Flights Suspended from Shivamogga to Bengaluru Shimoga IndiGo Flight Services to Stop from May 1
Indigo Flights Suspended

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor